ನವದೆಹಲಿ: ಯೆಸ್ ಬ್ಯಾಂಕ್ ಹಗರಣಕ್ಕೆ ಸಂಬಂಧಿಸಿ ಬಂಧಿಸಲಾಗಿರುವ ಎಬಿಐಎಲ್‌ನ ಅಧ್ಯಕ್ಷ ಅವಿನಾಶ್ ಭೋಸಲೆ ಅವರನ್ನು ವಿಚಾರಣೆಗಾಗಿ ಸಿಬಿಐ ಅಧಿಕಾರಿಗಳು ದೆಹಲಿಗೆ ಕರೆತರಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

ಯೆಸ್ ಬ್ಯಾಂಕ್ ಸಂಸ್ಥಾಪಕ ರಾಣಾ ಕಪೂರ್ ಮತ್ತು ಡಿಎಚ್‌ಎಫ್‌ಎಲ್‌ನ ಕಪಿಲ್ ವಧವನ್ ಶಾಮೀಲಾಗಿರುವ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿ ಅವಿನಾಶ್ ಅವರನ್ನು 2020ರಲ್ಲಿ ಮುಂಬೈನಲ್ಲಿ ಸಿಬಿಐ ಬಂಧಿಸಿತ್ತು.

ಯೆಸ್ ಬ್ಯಾಂಕ್ ಮತ್ತು ಡಿಎಚ್‌ಎಫ್‌ಎಲ್ ಹಗರಣದಲ್ಲಿ ಮಹಾರಾಷ್ಟ್ರದ ಹೆಸರಾಂತ ಬಿಲ್ಡರ್‌ಗಳು ಶಾಮೀಲಾಗಿದ್ದಾರೆಯೇ ಎಂಬುದರ ಕುರಿತು ಸಿಬಿಐ ತನಿಖೆ ನಡೆಸುತ್ತಿದೆ ಎಂದೂ ಅಧಿಕಾರಿಗಳು ಹೇಳಿದ್ದಾರೆ.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಪ್ರಮುಖ ಬಿಲ್ಡರ್‌ಗಳ ಕಚೇರಿಗಳಲ್ಲಿ ಏಪ್ರಿಲ್ 30ರಂದು ಸಿಬಿಐ ಶೋಧಕಾರ್ಯ ನಡೆಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.