ಬೆಂಗಳೂರು: ‘ಮುಖ್ಯಮಂತ್ರಿ ಅವರ ಒಂದು ಲಕ್ಷ ಮನೆ’ ಯೋಜನೆ ಅಡಿ ಆಯ್ಕೆಯಾದ 12,153 ಕುಟುಂಬಗಳು ಕಟ್ಟಬೇಕಿದ್ದ ತಲಾ ₹1 ಲಕ್ಷ ವಂತಿಗೆಯನ್ನು ಸರ್ಕಾರವೇ ಭರಿಸಲಿದೆ.

ವಿಧಾನಸೌಧದಲ್ಲಿ ಗುರುವಾರ ನಡೆದ ಸಭೆಯಲ್ಲಿ ಕಾಂಗ್ರೆಸ್, ಬಿಜೆಪಿ ಶಾಸಕರ ಮನವಿ ಪುರಸ್ಕರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಫಲಾನುಭವಿಗಳ ವಂತಿಕೆಯ ಒಟ್ಟು ವೆಚ್ಚ ₹121.53 ಕೋಟಿ ಬಿಡುಗಡೆ ಮಾಡಲು ಸಮ್ಮತಿಸಿದ್ದಾರೆ ಎಂದು ವಸತಿ ಸಚಿವ ಜಮೀರ್ ಅಹಮದ್ ಖಾನ್ ಮಾಹಿತಿ ನೀಡಿದರು.

ಈ ಯೋಜನೆಗೆ 2017ರಲ್ಲಿ ಅಧಿಸೂಚನೆ ಹೊರಡಿಸಲಾಗಿತ್ತು. ₹6 ಲಕ್ಷ ನಿಗದಿ ಮಾಡಲಾಗಿತ್ತು. ಕೇಂದ್ರ ಸರ್ಕಾರ ₹1.50 ಲಕ್ಷ, ರಾಜ್ಯ ಸರ್ಕಾರ ಸಾಮಾನ್ಯ ವರ್ಗಕ್ಕೆ ₹1.20 ಲಕ್ಷ, ಪರಿಶಿಷ್ಟ ವರ್ಗಕ್ಕೆ ₹2 ಲಕ್ಷ ನಿಗದಿ ಮಾಡಿತ್ತು. ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾದ ನಂತರ 10.60 ಲಕ್ಷಕ್ಕೆ ಹೆಚ್ಚಳ ಮಾಡಿದ್ದರು. ₹60 ಸಾವಿರ ಜಿಎಸ್ ಟಿ ಸೇರಿ 11. 20 ಲಕ್ಷವಾಗಿತ್ತು. ಸಿದ್ದರಾಮಯ್ಯ ಅವರು ಈಗ ತೆಗೆದುಕೊಂಡ ತೀರ್ಮಾನದಿಂದ ಸಾಮಾನ್ಯ ವರ್ಗ ₹7.50 ಲಕ್ಷ, ಪರಿಶಿಷ್ಟರು ₹6.70 ಲಕ್ಷ ಕಟ್ಟಬೇಕಾಗುತ್ತದೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.