ಬೆಂಗಳೂರು: ರಾಜ್ಯದ ಎಲ್ಲ ಜಿಲ್ಲಾ ಪಂಚಾಯಿತಿಗಳು ಮತ್ತು ತಾಲ್ಲೂಕು ಪಂಚಾಯಿತಿಗಳ ಕ್ಷೇತ್ರ ಪುನರ್ ವಿಂಗಡಣೆಯ ಪರಿಷ್ಕೃತ ಕರಡು ಪಟ್ಟಿಯನ್ನು ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗವು ಮಂಗಳವಾರ ಪ್ರಕಟಿಸಿದೆ.

ನಿವೃತ್ತ ಐಎಎಸ್ ಅಧಿಕಾರಿ ಎಂ. ಲಕ್ಷ್ಮೀನಾರಾಯಣ ನೇತೃತ್ವದ ಆಯೋಗವು ಸಿದ್ಧಪಡಿಸಿದ್ದ ಕ್ಷೇತ್ರಗಳ ಪುನರ್ ವಿಂಗಡಣೆ ಪಟ್ಟಿಯನ್ನು ಜನವರಿಯಲ್ಲಿ ಪ್ರಕಟಿಸಲಾಗಿತ್ತು. ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ನಿವೃತ್ತ ಐಎಎಸ್ ಅಧಿಕಾರಿ ಎಂ.ಆರ್. ಕಾಂಬ್ಳೆ ನೇತೃತ್ವದಲ್ಲಿ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗವನ್ನು ನೇಮಿಸಲಾಗಿತ್ತು.

ಹೊಸ ಆಯೋಗವು ಸಿದ್ಧಪಡಿಸಿರುವ ಪರಿಷ್ಕೃತ ಕ್ಷೇತ್ರ ಪುನರ್ ವಿಂಗಡಣೆ ಪಟ್ಟಿಯನ್ನು ಪ್ರಕಟಿಸಲಾಗಿದೆ. ಕ್ಷೇತ್ರಗಳ ಒಟ್ಟು ಸಂಖ್ಯೆಯಲ್ಲಿ ಬದಲಾವಣೆ ಆಗಿಲ್ಲ.

ಇದೇ 19ರವರೆಗೂ ಆಕ್ಷೇಪಣೆ ಸಲ್ಲಿಸಲು ಅವಕಾಶವಿದೆ. ಹೆಚ್ಚಿನ ಮಾಹಿತಿಗಾಗಿ ಆಯೋಗದ ವೆಬ್ಸೈಟ್ https://rdpr.karnataka.gov.in/rdc/public/ ಸಂಪರ್ಕಿಸಬಹುದು ಎಂದು ಆಯೋಗದ ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.