ಬಾಗಲಕೋಟೆ: ಬಾದಾಮಿ ತಾಲ್ಲೂಕಿನ ಕುಳಗೇರಿ ಕ್ರಾಸ್ ಹಾಗೂ ಕಟಗೇರಿ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕೇಂದ್ರಗಳ ಮುಖ್ಯ ಹಾಗೂ ಉಪ ಅಧೀಕ್ಷಕರನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಗುರುವಾರ ಬದಲಾಯಿಸಿದೆ.

‘ಎಸ್‌ಎಸ್‌ಎಲ್‌ಸಿ ಪರೀಕ್ಷೆ: ನಕಲು ಅಬಾಧಿತ’ ಶೀರ್ಷಿಕೆ ಅಡಿಯಲ್ಲಿ ‘ಪ್ರಜಾವಾಣಿ’ಯಲ್ಲಿ ವರದಿ ಪ್ರಕಟವಾದ ಹಿನ್ನೆಲೆಯಲ್ಲಿ, ಬಾದಾಮಿ ಕ್ಷೇತ್ರಶಿಕ್ಷಣಾಧಿಕಾರಿ ಎ.ಎಸ್.ಹತ್ತಳ್ಳಿ ಅವರು ತಾಲ್ಲೂಕಿನ ಎಲ್ಲ ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀಕ್ಷಕರು, ಸ್ಥಾನಿಕ ಜಾಗೃತದಳ ಹಾಗೂ ಇನ್ನಿತರ ಅಧಿಕಾರಿಗಳ ತುರ್ತು ಸಭೆ ನಡೆಸಿದರು.

ಪರೀಕ್ಷಾ ಕಾರ್ಯದ ಪಾವಿತ್ರ್ಯ ಕಾಪಾಡುವ ದೃಷ್ಟಿಯಿಂದ ಹಾಗೂ ವಿದ್ಯಾರ್ಥಿಗಳು ಭಯಮುಕ್ತವಾಗಿ ಪರೀಕ್ಷೆ ಬರೆಯಲು ನೆರವಾಗಲು ಎರಡೂ ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರನ್ನು ಬದಲಿಸಿ ಬೇರೆ ಅಧಿಕಾರಿಗಳನ್ನು ನೇಮಿಸುವ ನಿರ್ಧಾರ ಪ್ರಕಟಿಸಿದರು.

ಪರೀಕ್ಷೆಯ ಮುಂದಿನ ಹಂತದಲ್ಲಿ ತಾಲ್ಲೂಕಿನ ಯಾವುದೇ ಕೇಂದ್ರದಲ್ಲಿ ಇಂತಹ ಘಟನೆಗಳು ನಡೆಯದಂತೆ ಎಚ್ಚರ ವಹಿಸಲು
ಸೂಚಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.