ಬೆಂಗಳೂರು: ‘ಭಾಷಾ ಅಲ್ಪಸಂಖ್ಯಾತ ಮತ್ತು ಕೇಂದ್ರೀಯ ಪಠ್ಯಕ್ರಮದ ಶಾಲೆಗಳಲ್ಲೂ ಕನ್ನಡವನ್ನು ಒಂದು ಭಾಷೆಯಾಗಿ ಈ ವರ್ಷದಿಂದಲೇ ಕಲಿಸಬೇಕು. ಇಲ್ಲವಾದರೆ ನಿರಾಕ್ಷೇಪಣಾ ಪತ್ರ (ಎನ್ಓಸಿ) ರದ್ದು ಮಾಡಲಾಗುವುದು’ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ತನ್ವೀರ್ ಸೇಠ್ ಎಚ್ಚರಿಸಿದರು.

ರಾಜ್ಯದಲ್ಲಿರುವ ತಮಿಳು, ತೆಲುಗು, ಮರಾಠಿ ಮುಂತಾದ ಭಾಷಾ ಅಲ್ಪಸಂಖ್ಯಾತ ಶಾಲೆಗಳು ಹಾಗೂ ಕೇಂದ್ರೀಯ ವಿದ್ಯಾಲಯ, ಸಿಬಿಎಸ್ಇ, ಐಸಿಎಸ್ಇ ಪಠ್ಯಕ್ರಮದ ಶಾಲೆಗಳು ಕಡ್ಡಾಯವಾಗಿ ಕನ್ನಡ ಬೋಧಿಸಬೇಕು ಎಂದು ಅವರು ಗುರುವಾರ ನಡೆಸಿದ ಮಾಧ್ಯಮಗೋಷ್ಠಿಯಲ್ಲಿ ಹೇಳಿದರು.

ಈ ಸಂಬಂಧ ಕಳೆದ ಮೇ 29ರಂದು ಎಲ್ಲ ಶಾಲೆಗಳಿಗೂ ಸುತ್ತೋಲೆ ಕಳುಹಿಸಲಾಗಿದೆ ಎಂದು ವಿವರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.