ಹರಪನಹಳ್ಳಿ: ‘ಸುಳ್ವಾಡಿ ಮಾರಮ್ಮ ದೇವಸ್ಥಾನದಲ್ಲಿ ನಡೆದ ‘ವಿಷ ಪ್ರಸಾದ’ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ದೇವಸ್ಥಾನವನ್ನು ಮುಜರಾಯಿ ಇಲಾಖೆ ವ್ಯಾಪ್ತಿಗೆ ತರುವ ಕುರಿತು ಅಧಿಕಾರಿಗಳು ಮತ್ತು ಸ್ಥಳೀಯ ಮುಖಂಡರ ಬಳಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು’ ಎಂದು ಮುಜರಾಯಿ ಸಚಿವ ಪಿ.ಟಿ. ಪರಮೇಶ್ವರನಾಯ್ಕ ಹೇಳಿದರು.

ಸಚಿವರಾದ ಬಳಿಕ ಮೊದಲ ಬಾರಿಗೆ ಪಟ್ಟಣಕ್ಕೆ ಶನಿವಾರ ಭೇಟಿ ನೀಡಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

‘ಇದು ಸಾಮಾನ್ಯ ಘಟನೆಯಲ್ಲ. ಇಂತಹ ಘಟನೆಗಳ ಬಗ್ಗೆ ಎಚ್ಚರಿಕೆ ವಹಿಸಲಾಗುವುದು. ಸುಳ್ವಾಡಿ ದೇವಸ್ಥಾನಕ್ಕೆ ಶೀಘ್ರ ಭೇಟಿ ನೀಡಿ ಪರಿಶೀಲಿಸುತ್ತೇನೆ. ದೇವಾಲಯದಲ್ಲಿ ಪ್ರಸಾದ ತಯಾರಿಸುವ ಬಗ್ಗೆಯೂ ಸಚಿವ ಸಂಪುಟದಲ್ಲಿ ಸೂಕ್ತ ನಿರ್ಣಯ ಕೈಗೊಳ್ಳಲಾಗುವುದು’ ಎಂದು ತಿಳಿಸಿದರು.

ಮುಖಂಡರಲ್ಲಿ ಬಣ ಇಲ್ಲ: ‘ಕಾಂಗ್ರೆಸ್ ಮುಖಂಡರಲ್ಲಿ ಯಾವುದೇ ಬಣವಿಲ್ಲ. ಪಕ್ಷ ನಿಷ್ಠೆ ಗುರುತಿಸಿ ಸಾಮಾಜಿಕ ನ್ಯಾಯದಡಿ ನನಗೆ ಸಚಿವ ಸ್ಥಾನ ನೀಡಿದ್ದಾರೆ’ ಎಂದರು.

‘ಹಿರಿಯ ಮುಖಂಡ ಶಾಮನೂರು ಶಿವಶಂಕರಪ್ಪ ಅವರಿಗೆ ಸಚಿವ ಸ್ಥಾನ ನೀಡಬೇಕಿತ್ತು. ಆದರೆ ಈ ವಿಚಾರ ಹೈಕಮಾಂಡ್ಗೆ ಬಿಟ್ಟಿದ್ದು. ರಮೇಶ ಜಾರಕಿಹೊಳಿ ಅವರ ಅಸಮಾಧಾನ ಬೇಗ ಶಮನಗೊಳ್ಳಲಿದೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.