ಬೆಳಗಾವಿ: ಇಲ್ಲಿನ ಬಸವರಾಜ ಕಟ್ಟೀಮನಿ ಪ್ರತಿಷ್ಠಾನವು ಡಿಸೆಂಬರ್ 5 ರಿಂದ ಎರಡು ದಿನಗಳ ರಾಜ್ಯ ಮಟ್ಟದ ಯುವ ಲೇಖಕರ ಸಮಾವೇಶವನ್ನು ಇಲ್ಲಿ ಏರ್ಪಡಿಸಿದೆ.

‘ಇದೇ ಪ್ರಥಮ ಬಾರಿಗೆ ಪ್ರತಿಷ್ಠಾನದ ವತಿಯಿಂದ ಹಮ್ಮಿಕೊಂಡಿರುವ ಈ ಸಮಾವೇಶದಲ್ಲಿ ಒಟ್ಟು ಆರು ಗೋಷ್ಠಿಗಳು ನಡೆಯಲಿವೆ. ಸುಮಾರು 30 ಯುವ ಲೇಖಕರು ಚರ್ಚೆಯಲ್ಲಿ ಪಾಲ್ಗೊಳ್ಳಲಿದ್ದಾರೆ’ ಎಂದು ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ.ಎಂ. ಕಲಬುರ್ಗಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ವಿಮರ್ಶಕ ಡಾ. ನಟರಾಜ್ ಹುಳಿಯಾರ್ ಸಮಾವೇಶ ಉದ್ಘಾಟಿಸುವರು. ಹಿರಿಯ ಸಾಹಿತಿ ಚಂದ್ರಕಾಂತ ಕುಸನೂರ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಅಧ್ಯಕ್ಷತೆಯನ್ನು ಹಿರಿಯ ವಿಮರ್ಶಕ ಡಾ. ಗಿರಡ್ಡಿ ಗೋವಿಂದರಾಜ ವಹಿಸಲಿದ್ದಾರೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.