ಮಂಡ್ಯ: ಲೋಕಸಭಾ ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿಯಾಗಿ ನಿವೃತ್ತ ಕೆಎಎಸ್ ಅಧಿಕಾರಿ ಡಾ.ಸಿದ್ದರಾಮಯ್ಯ ಅವರ ಹೆಸರನ್ನು ಪಕ್ಷದ ರಾಜ್ಯಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಗುರುವಾರ ಘೋಷಣೆ ಮಾಡಿದ್ದಾರೆ.

ಮಾಜಿ ವಿಧಾನ ಪರಿಷತ್ ಸದಸ್ಯ ಅಶ್ವಥ್ ನಾರಾಯಣ ಅವರೇ ಅಭ್ಯರ್ಥಿಯಾಗುತ್ತಾರೆ ಎನ್ನಲಾಗುತ್ತಿತ್ತು. ಆದರೆ ದಿಡೀರ್ ಬೆಳವಣಿಗೆಯಲ್ಲಿ ಡಾ.ಸಿದ್ದರಾಮಯ್ಯ ಹೆಸರು ಘೋಷಣೆಯಾಗಿದೆ. ಮಾಜಿ ಶಾಸಕ ದೊಡ್ಡಬೋರೇಗೌಡ ಅಣ್ಣನ ಮಗನಾದ ಡಾ.ಸಿದ್ದರಾಮಯ್ಯ ವಾಣಿಜ್ಯ ತೆರಿಗೆ ಇಲಾಖೆಯಲ್ಲಿ ಹೆಚ್ಚುವರಿ ಆಯುಕ್ತರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದಾರೆ. ರಾಜ್ಯ ವಿದ್ಯುತ್ ನಿಯಂತ್ರಣ ಆಯೋಗದ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸಿದ್ದಾರೆ.

ಚಿಕ್ಕಪ್ಪ ದೊಡ್ಡಬೋರೇಗೌಡರು ಶ್ರೀರಂಗಪಟ್ಟಣ ಹಾಗೂ ಮಂಡ್ಯ ಕ್ಷೇತ್ರದಲ್ಲಿ ತಲಾ ಒಂದು ಬಾರಿ ಶಾಸಕರಾಗಿದ್ದಾರೆ. ಸ್ಥಳೀಯವಾಗಿ ಸಿದ್ದರಾಮಯ್ಯ ಅವರ ಕುಟುಂಬಕ್ಕೆ ಉತ್ತಮ ಹೆಸರು ಇದೆ. ಜಿಲ್ಲೆಯಲ್ಲಿ ಬಿಜೆಪಿ ಸಂಘಟಿಸುವ ಉದ್ದೇಶದಿಂದ ಸಿದ್ದರಾಮಯ್ಯ ಅವರಿಗೆ ಟಿಕೆಟ್ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.

‘ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲೇ ಸ್ಪರ್ಧೆ ಮಾಡುವಂತೆ ಬೆಂಬಲಿಗರು ಒತ್ತಾಯ ಮಾಡಿದ್ದರು. ಆಗ ನಾನು ಯಾವ ಪಕ್ಷದಲ್ಲೂ ಇರಲಿಲ್ಲ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ದೇಶ ಸೇವೆಯನ್ನು ಮೆಚ್ಚಿ ಬಿಜೆಪಿ ಸೇರಿದ್ದೇನೆ’ ಎಂದು ಡಾ.ಸಿದ್ದರಾಮಯ್ಯ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.