ಬೆಂಗಳೂರು: ಜೂನ್ನಲ್ಲಿ ತೆರವಾಗಲಿರುವ ರಾಜ್ಯ ವಿಧಾನ ಪರಿಷತ್ನ 11 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಕಾಂಗ್ರೆಸ್ ಬುಧವಾರ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ.

ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ನಾಲ್ಕು ಅಭ್ಯರ್ಥಿಗಳ ಸ್ಪರ್ಧೆಗೆ ಅನುಮೋದನೆ ನೀಡಿದ್ದಾರೆ. ಸಿ.ಎಂ.ಇಬ್ರಾಹಿಂ, ಕೆ.ಗೋವಿಂದರಾಜ್, ಅರವಿಂದ್ ಕುಮಾರ್ ಎಸ್.ಅರಳಿ ಹಾಗೂ ಕೆ.ಹರೀಶ್ ಕುಮಾರ್ ವಿಧಾನ ಪರಿಷತ್ ಸ್ಥಾನಗಳಿಗೆ ಸ್ಪರ್ಧಿಸಲಿದ್ದಾರೆ.

ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ ನಡೆಯುವ ದೈವಾರ್ಷಿಕ ಚುನಾವಣೆಯ 11 ಸ್ಥಾನಗಳಲ್ಲಿ ವಿಧಾನಸಭೆಯಲ್ಲಿರುವ ಸಂಖ್ಯಾ ಬಲಕ್ಕೆ ಅನುಗುಣವಾಗಿ ಬಿಜೆಪಿ 5, ಕಾಂಗ್ರೆಸ್ 4 ಮತ್ತು ಜೆಡಿಎಸ್ 2 ಸ್ಥಾನಗಳನ್ನು ಗೆಲ್ಲಬಹುದು. ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 104, ಕಾಂಗ್ರೆಸ್ 78 ಮತ್ತು ಜೆಡಿಎಸ್ 37 ಸ್ಥಾನಗಳನ್ನು ಗೆದ್ದಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.