ಬೆಂಗಳೂರು: ಹಿರಿಯ ಸಾಹಿತಿ, ಪತ್ರಕರ್ತ ಪ್ರೊ.ಎಚ್.ಎಲ್.ಕೇಶವಮೂರ್ತಿ ಅವರು ಗುರುವಾರ ರಾತ್ರಿ ನಿಧನರಾಗಿದ್ದಾರೆ. ಅವರಿಗೆ 78 ವರ್ಷ ವಯಸ್ಸಾಗಿತ್ತು.

ಮೃತರ ಅಂತ್ಯಕ್ರಿಯೆ ನಾಳೆ ಮಂಡ್ಯದಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಹೆರಗನ ಹಳ್ಳಿಯಲ್ಲಿ ೧೯೩೯ರ ಡಿಸೆಂಬರ್ ೨೮ ರಂದು ಎಚ್.ಎಂ. ಲಿಂಗೇಗೌಡ, ಚೆನ್ನಮ್ಮ ದಂಪತಿಯ ಮಗನಾಗಿ ಜನಿಸಿದ ಕೇಶವಮೂರ್ತಿ ಅವರು ಇಂಜನಿಯರಿಂಗ್‍ನಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದರು.

ಮಂಡ್ಯದ ಪಿ.ಇ.ಎಸ್. ಇಂಜಿನಿಯರ್ ಕಾಲೇಜಿ ನಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದ ಇವರು ನಾಡಿನ ಪ್ರಸಿದ್ಧ ಪತ್ರಿಕೆಗಳಲ್ಲಿ ಮೂಲಕ ವಿಡಂಬನೆ, ಹಾಸ್ಯ ಬರಹಗಳನ್ನು ಬರೆಯುತ್ತಿದ್ದರು.

ನಿನ್ಯಾಕೋ ನಿನ್ನ ಹಂಗ್ಯಾಕೋ ಮಾವ?, ಎಂಗಾರ ಟಿಕೆಟ್ ಕೊಡಿ, ಗೌರವಾನ್ವಿತ ದಗಾಕೋರರು, ಇಸ್ಪೀಟು ನ್ಯಾಯ, ಜೆಂಟ್ಸ್ ದ್ರೌಪದಿ ವಸ್ತ್ರಾಪಹರಣ ಪ್ರಕರಣವು ಇವರ ಕೃತಿಗಳು.

೧೯೭೨ರಲ್ಲಿ ಇವರ ‘ನೀನ್ಯಾಕೊ ನಿನ್ನ ಹಂಗ್ಯಾಕೊ’ ಕೃತಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.