ಮೈಸೂರು: ಇಲ್ಲಿನ ರಂಗಾಯಣದ ನಿರ್ದೇಶಕ ಸ್ಥಾನಕ್ಕೆ ಅಡ್ಡಂಡ ಸಿ. ಕಾರ್ಯಪ್ಪ ಭಾನುವಾರ ರಾಜೀನಾಮೆ ನೀಡಿದ್ದಾರೆ.

‘ನನ್ನನ್ನು ನಿರ್ದೇಶಕನನ್ನಾಗಿ ನೇಮಿಸಿದ್ದ ಬಿಜೆಪಿ ನೇತೃತ್ವದ ಸರ್ಕಾರ ವಿಧಾನ ಸಭಾ ಚುನಾವಣೆಯಲ್ಲಿ ಅಧಿಕಾರ ಕಳೆದುಕೊಂಡಿದೆ. ಜನಾದೇಶವನ್ನು ಗೌರವಿಸುತ್ತೇನೆ. ಈ ಕಾರಣದಿಂದ ನೈತಿಕ ಜವಾಬ್ದಾರಿಯಿಂದ ಮೈಸೂರು ರಂಗಾಯಣದ ನಿರ್ದೇಶಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ’ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

‘ನಾನು 2019ರ ಡಿ.31ರಂದು ಅಧಿಕಾರ ವಹಿಸಿಕೊಂಡಾಗ ರಂಗಾಯಣದ ಆರ್ಥಿಕ ಸ್ಥಿತಿ ಅಷ್ಟೇನೂ ಚೆನ್ನಾಗಿರಲಿಲ್ಲ. ಈಗ ₹2.09 ಕೋಟಿ ನಿರಖು ಠೇವಣಿ ಇದೆ. ಸಂಸ್ಥೆಯ ಬ್ಯಾಂಕ್ ಖಾತೆಯಲ್ಲಿ ₹1.57 ಕೋಟಿ ಉಳಿತಾಯದ ಹಣವಿದೆ. ಸಂಸ್ಥೆಯ ಪ್ರದರ್ಶನ, ದಾನಿಗಳ ನೆರವು, ಅನುದಾನ ಇತ್ಯಾದಿಗಳನ್ನು ಮಿತವ್ಯಯ ಮಾಡಿ ಉಳಿಕೆ ಮಾಡಲಾಗಿದೆ. ಸರ್ಕಾರದ ಇಡುಗಂಟು ಮೊತ್ತ ₹4 ಕೋಟಿ ಇದ್ದು, ಬಡ್ಡಿ ಮೊತ್ತ ₹50 ಲಕ್ಷ ಸಂಸ್ಥೆಗೆ ಸಿಗಲಿದೆ. ಒಟ್ಟು ₹4.16 ಕೋಟಿ ಮೊತ್ತ ಸಂಸ್ಥೆಯ ಖಾತೆಯಲ್ಲಿದೆ. ರಾಜ್ಯದ ಬೇರೆ ರಂಗಾಯಣ ಸಂಸ್ಥೆಗಳ ಖಾತೆಯಲ್ಲಿ ₹15 ಲಕ್ಷ ಕೂಡ ಉಳಿತಾಯ ಇಲ್ಲ. 3 ವರ್ಷ ಹಗಲಿರುಳು ದುಡಿದು ಮೈಸೂರು ರಂಗಾಯಣದ ಆರ್ಥಿಕ ಸ್ಥಿತಿ ಭದ್ರಪಡಿಸಿದ್ದೇನೆ’ ಎಂದು ವಿವರಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.