ನವದೆಹಲಿ: ಹಿರಿಯ ಐಪಿಎಸ್ ಅಧಿಕಾರಿ ಪ್ರವೀಣ್ ಸೂದ್ ಅವರು ಸಿಬಿಐನ ನೂತನ ನಿರ್ದೇಶಕರಾಗಿ ಗುರುವಾರ ಅಧಿಕಾರ ಸ್ವೀಕರಿಸಿದರು.

ನವದೆಹಲಿಯಲ್ಲಿರುವ ಸಿಬಿಐ ಪ್ರಧಾನ ಕಚೇರಿಯಲ್ಲಿ ನಿರ್ಗಮಿತ ನಿರ್ದೇಶಕ ಸುಬೋಧ್ ಕುಮಾರ್ ಜೈಸ್ವಾಲ್ ಅವರು ಸೂದ್ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ಸೂದ್ ಅವರ ಅಧಿಕಾರ ಅವಧಿ ಎರಡು ವರ್ಷ ಇರಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

1986ನೇ ಬ್ಯಾಚ್‌ನ ಕರ್ನಾಟಕ ಕೇಡರ್‌ನ ಐಪಿಎಸ್ ಅಧಿಕಾರಿಯಾಗಿರುವ ಸೂದ್ ಅವರು ಕರ್ನಾಟಕ ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿದ್ದರು.

ಪ್ರಧಾನಿ ನರೇಂದ್ರ ಮೋದಿ, ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಮತ್ತು ಲೋಕಸಭೆಯಲ್ಲಿ ಕಾಂಗ್ರೆಸ್ ಪಕ್ಷದ ನಾಯಕರಾಗಿರುವ ಅಧೀರ್ ರಂಜನ್ ಚೌಧರಿ ಅವರನ್ನೊಳಗೊಂಡ ಉನ್ನತ ಮಟ್ಟದ ಸಮಿತಿಯು ಸೂದ್ ಅವರ ಹೆಸರನ್ನು ಈ ಹುದ್ದೆಗೆ ಶಿಫಾರಸು ಮಾಡಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.