ರೋಮ್: ವಿದೇಶಿ ಪ್ರವಾಸಿಗರಿದ್ದ ಅತ್ಯಾಧುನಿಕ ಸೌಲಭ್ಯಗಳನ್ನು ಒಳಗೊಂಡ ಹಾಯಿದೋಣಿಯು ಸಿಸಿಲಿ ದ್ವೀಪದಲ್ಲಿ ಸೋಮವಾರ ಮುಳುಗಿದೆ. ಘಟನಾ ಸ್ಥಳದಲ್ಲಿ ಒಂದು ಮೃತದೇಹ ಪತ್ತೆಯಾಗಿದ್ದು, ಆರು ಮಂದಿ ನಾಪತ್ತೆಯಾಗಿದ್ದಾರೆ ಮತ್ತು 15 ಜನರನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

56 ಮೀಟರ್ ಉದ್ದದ ಹಾಯಿದೋಣಿಯಲ್ಲಿ 10 ಸಿಬ್ಬಂದಿ ಮತ್ತು ಬ್ರಿಟನ್, ಅಮೆರಿಕ ಮತ್ತು ಕೆನಡಾ ದೇಶದ 12 ಪ್ರಯಾಣಿಕರಿದ್ದರು ಎಂದು ಇಟಲಿ ಕರಾವಳಿ ಭದ್ರತಾ ಪಡೆಯ ಸಿಬ್ಬಂದಿ ತಿಳಿಸಿದ್ದಾರೆ.

‘ನಾಪತ್ತೆಯಾದವರಿಗಾಗಿ ಶೋಧ ನಡೆಸಲಾಗುತ್ತಿದೆ. ಹೆಲಿಕಾಪ್ಟರ್, ರಕ್ಷಣಾ ಬೋಟ್‌ಗಳು, ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ. ಅನುಭವಿ ಮುಳುಗುತಜ್ಞರು ಸಹ ಕಾರ್ಯಾಚರಣೆ ನಡೆಸುತ್ತಿದ್ದಾರೆ’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.