ವಾಷಿಂಗ್ಟನ್: ಇಸ್ರೇಲ್ನಲ್ಲಿ ಹಮಾಸ್ ಬಂಡುಕೋರರ ದಾಳಿಯಲ್ಲಿ ಅಮೆರಿಕದ 22 ಮಂದಿ ಮೃತಪಟ್ಟಿದ್ದು, 17 ಮಂದಿಯ ಬಗ್ಗೆ ಯಾವುದೇ ಮಾಹಿತಿಯಿಲ್ಲ ಎಂದು ಶ್ವೇತಭವನ ತಿಳಿಸಿದೆ.

ಪ್ಯಾಲೆಸ್ಟೀನ್ನ ಹಮಾಸ್ ಬಂಡುಕೋರರು ಇನ್ನಷ್ಟು ಅಮೆರಿಕನ್ನರನ್ನು ಒತ್ತೆಯಾಳಾಗಿ ಇರಿಸಿದ್ದು, ಈ ಸಂಬಂಧ ಇಸ್ರೇಲ್ ಜೊತೆ ನಿಕಟ ಸಂಪರ್ಕದಲ್ಲಿದ್ದೇವೆ ಎಂದು ರಾಷ್ಟ್ರೀಯ ಭದ್ರತಾ ಸಲಹೆಗಾರ ಜೇಕ್ ಸುಲ್ಲಿವಾನ್ ತಿಳಿಸಿದ್ದಾರೆ.

ನಾವು ಪರಿಸ್ಥಿತಿ ಮೇಲೆ ಸೂಕ್ಷ್ಮ ನಿಗಾ ಇರಿಸಿದ್ದೇವೆ. ಇಸ್ರೇಲ್ ಮೇಲೆ ನಡೆದ ಉಗ್ರರ ದಾಳಿಯಲ್ಲಿ 22 ಮಂದಿ ಮೃತಪಟ್ಟಿದ್ದಾರೆ. ಹಮಾಸ್ ಬಂಡುಕೋರರು ಒತ್ತೆಯಾಳಾಗಿ ಇರಿಸಿದವರಲ್ಲಿ ಅಮೆರಿಕದ ಪ್ರಜೆಗಳು ಸೇರಿದ್ದಾರೆ. ಎಂದು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಆ್ಯಂಟನಿ ಬ್ಲಿಂಕನ್ ಹೇಳಿದ್ದಾರೆ.

ಹಮಾಸ್ ಬಂಡುಕೋರರನ್ನು ಮಟ್ಟ ಹಾಕಲು ಇಸ್ರೇಲ್ಗೆ ಅಮೆರಿಕ ಈಗಾಗಲೇ ಶಸ್ತ್ರಾಸ್ತ್ರ ನೆರವನ್ನು ಘೋಷಿಸಿದೆ.

ಇಸ್ರೇಲ್ ಮೇಲೆ ಹಮಾಸ್ ಬಂಡುಕೋರರ ದಾಳಿಯು ಯಹೂದಿ ಜನರ ಮೇಲಿನ ನರಮೇಧದ ಕರಾಳ ನೆನಪುಗಳನ್ನು ಮೆಲುಕು ಹಾಕುವಂತಾಗಿದೆ ಎಂದು ಅಮೆರಿಕದ ಅಧ್ಯಕ್ಷ ಜೋ ಬೈಡನ್ ಹೇಳಿದ್ದಾರೆ.

ಇಸ್ರೇಲ್ನಲ್ಲಿನ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ನಿಗಾ ವಹಿಸುತ್ತಿದ್ದೇವೆ. ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ಮಾತುಕತೆ ನಡೆಸಿದ್ದೇವೆ ಎಂದು ಅವರು ಹೇಳಿದ್ದಾರೆ.

ಇಸ್ರೇಲ್ ಹಾಗೂ ಗಾಜಾ ಪಟ್ಟಿಯಲ್ಲಿ ಇದುವರೆಗೆ ಕನಿಷ್ಠ 3,900 ಮಂದಿ ಸಾವನ್ನಪ್ಪಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.