ಲಾಹೋರ್: ಪಾಕಿಸ್ತಾನದ ಲಾಹೋರ್ನಲ್ಲಿರುವ ಪಂಜಾಬ್ ವಿಶ್ವವಿದ್ಯಾಲಯದಲ್ಲಿ ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕ್ಯಾಂಪಸ್ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳು ಹಾಗೂ ಭದ್ರತಾ ಸಿಬ್ಬಂದಿ ನಡುವೆ ನಡೆದ ಸಂಘರ್ಷದಲ್ಲಿ 30ಕ್ಕೂ ಅಧಿಕ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.

ಕಳೆದ ವಾರ ವಿಶ್ವವಿದ್ಯಾಲಯದ ಹಾಸ್ಟಲ್ನಲ್ಲಿ ಆತ್ಮಹತ್ಯೆ ವಿದ್ಯಾರ್ಥಿನಿಯೊಬ್ಬರು ಮಾಡಿಕೊಂಡಿದ್ದರು. ಈ ಸಾವಿಗೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿ ಹಾಗೂ ಶುಲ್ಕ ಹೆಚ್ಚಳ ಸೇರಿ ವಿವಿಧ ವಿಷಯಗಳ ಕುರಿತು ಪಂಜಾಬ್ ಯೂನಿವರ್ಸಿಟಿ ಸ್ಟೂಡೆಂಟ್ ಫೆಡರೇಶನ್ (ಪಿಯುಎಸ್ಎಫ್) ವಿದ್ಯಾರ್ಥಿಗಳು ಮಂಗಳವಾರ ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಅವಘಡ ಸಂಭವಿಸಿದೆ.

‘ಪ್ರತಿಭಟನಕಾರರು ಪ್ರಚೋದನಕಾರಿ ಭಾಷಣ ಮಾಡಿದರು. ತಮ್ಮನ್ನು ತಡೆಯಲು ಯತ್ನಿಸಿದ ಸಿಬ್ಬಂದಿ ಮೇಲೆ ಕಲ್ಲುಗಳನ್ನು ಎಸೆದರು. ಈ ವೇಳೆ 10 ಭದ್ರತಾ ಸಿಬ್ಬಂದಿ ಹಾಗೂ ಒಬ್ಬ ಪೊಲೀಸ್ ಅಧಿಕಾರಿ ಸೇರಿ ಕೆಲ ವಿದ್ಯಾರ್ಥಿಗಳೂ ಗಾಯಗೊಂಡಿದ್ದಾರೆ’ ಎಂದು ವಿಶ್ವವಿದ್ಯಾಲಯದ ವಕ್ತಾರ ಖರ್ರುಂ ಶಹಜಾದ್ ಅವರು ಬುಧವಾರ ತಿಳಿಸಿದರು.

‘ಸಿಬ್ಬಂದಿ ಮೇಲೆ ದಾಳಿ ಮಾಡಿದ್ದಕ್ಕಾಗಿ 50 ವಿದ್ಯಾರ್ಥಿಗಳ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಮಂಗಳವಾರ ರಾತ್ರಿ ಅವರಲ್ಲಿ ಕೆಲವರನ್ನು ಪೊಲೀಸರು ಬಂಧಿಸಿದ್ದಾರೆ. ಸಹಪಾಠಿಗಳನ್ನು ಹಿಂಸಾಚಾರಕ್ಕೆ ಪ್ರಚೋದಿಸುವ ವಿದ್ಯಾರ್ಥಿಗಳ ವಿರುದ್ಧ ವಿಶ್ವವಿದ್ಯಾಲಯವು ಕಠಿಣ ಕ್ರಮ ಕೈಗೊಳ್ಳಬಹುದು’ ಎಂದೂ ಹೇಳಿದರು.

‘ವಿದ್ಯಾರ್ಥಿಗಳನ್ನು ಚದುರಿಸಲು ಭದ್ರತಾ ಸಿಬ್ಬಂದಿ ಹಲ್ಲೆ ನಡೆಸಿದರು. ಸಿಬ್ಬಂದಿ ನಡೆಸಿದ ಹಲ್ಲೆಯಿಂದಾಗಿ ಕನಿಷ್ಠ 30 ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಲ್ಲೆ ನಡೆಸಿದ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಪಿಯುಎಸ್ಎಫ್ ನಾಯಕ ಆರಿಫ್ ಕಾಕರ್ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.