ಟೊರಾಂಟೊ: ಕೆನಡಾದ ಟೊರಾಂಟೊದಲ್ಲಿ ಗುರುವಾರ ರಾತ್ರಿ ಭಾರತೀಯರು ಪ್ರಯಾಣಿಸುತ್ತಿದ್ದ ಟೆಸ್ಲಾ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು, ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ನಾಲ್ವರು ಮೃತಪಟ್ಟಿದ್ದಾರೆ ಎಂದು ‘ಇಂಡಿಯಾ ಟುಡೇ’ ವರದಿ ಮಾಡಿದೆ.

ಮೃತರನ್ನು ಗುಜರಾತ್ನ ಗೋಧ್ರಾದ 30 ವರ್ಷದ ಕೆತಾ ಗೊಹಿಲ್, 26 ವರ್ಷದ ನಿಲ್ ಗೊಹಿಲ್ ಎಂದು ಗುರುತಿಸಿದ್ದು, ಇನ್ನಿಬ್ಬರ ಗುರುತು ತಿಳಿಯಬೇಕಿದೆ. ಅಪಘಾತದ ವೇಳೆ ರಸ್ತೆಯಲ್ಲಿ ಸಾಗುತ್ತಿದ್ದ ದ್ವಿಚಕ್ರ ಸವಾರರೊಬ್ಬರು ಮಹಿಳೆಯೊಬ್ಬರನ್ನು ರಕ್ಷಿಸಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಹಿಳೆಯು ತೀವ್ರವಾಗಿ ಗಾಯಗೊಂಡಿದ್ದರೂ ಜೀವಕ್ಕೆ ಅಪಾಯವಿಲ್ಲ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ಬ್ಯಾಟರಿಯಲ್ಲಿ ಬೆಂಕಿ ಕಾಣಿಸಿಕೊಂಡು, ನಂತರ ವಿಭಜಕಕ್ಕೆ ಡಿಕ್ಕಿ ಹೊಡೆದು ಬೆಂಕಿ ಹತ್ತಿಕೊಂಡಿತು. ಆದರೆ, ಅಪಘಾತಕ್ಕೀಡಾದ ಕಾರು ಸ್ವಯಂಚಾಲಿತವೇ ಎಂಬುದು ಇನ್ನಷ್ಟೇ ಖಚಿತವಾಗಬೇಕಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.