ಇಸ್ಲಾಮಾಬಾದ್: ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್ ಸೇರಿ ಕೆಲವು ಭಾಗಗಳಲ್ಲಿ ಬುಧವಾರ ಭೂಕಂಪವಾಗಿದೆ. ರಿಕ್ಟರ್ ಮಾಪಕದಲ್ಲಿ ಭೂಕಂಪದ ತೀವ್ರತೆ 5.3ರಷ್ಟು ಇತ್ತು.

ಯುನೈಟೆಡ್ ಸ್ಟೇಟ್ಸ್ ಜಿಯಾಲಜಿಕಲ್ ಸರ್ವೆ (ಯುಎಸ್ಜಿಎಸ್) ಪ್ರಕಾರ ಭೂಕಂಪದ ತೀವ್ರತೆ ರಿಕ್ಟರ್ ಮಾಪಕದಲ್ಲಿ 5.1ರಷ್ಟಿತ್ತು. ಆದರೆ, ಪಾಕಿಸ್ತಾನದ ಹವಾಮಾನ ಇಲಾಖೆಯು ಹೇಳುವಂತೆ, 5.3ರಷ್ಟು ತೀವ್ರತೆಯ ಭೂಕಂಪ ಆಗಿದೆ.

ಅಫ್ಗಾನಿಸ್ತಾನದ ಹಿಂದೂ ಕುಶ್ ಪರ್ವತ ಶ್ರೇಣಿಯು ಭೂಕಂಪದ ಕೇಂದ್ರ ಬಿಂದು ಎಂದು ಇಸ್ಲಾಮಾಬಾದ್ನ ರಾಷ್ಟ್ರೀಯ ಭೂಕಂಪ ವಿಜ್ಞಾನ ಕೇಂದ್ರವು ತಿಳಿಸಿದೆ. ಪಾಕಿಸ್ತಾನದ ಕಾಲಮಾನದಲ್ಲಿ ಬೆಳಿಗ್ಗೆ 10:13ಕ್ಕೆ ಭೂಕಂಪ ಸಂಭವಿಸಿದೆ. ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿಯೂ ಕಂಪನದ ಅನುಭವವಾಗಿದೆ.

ಕಂಪನದ ಅನುಭವವಾದ ಕಡೆ ಜನರು ಮನೆಗಳಿಂದ ಹೊರಗೆ ಓಡಿಬಂದರು. ಆದರೆ, ಇದುವರೆಗೆ ಯಾವುದೇ ಸಾವು–ನೋವು ಆದ ವರದಿಗಳು ಬಂದಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.