ರಬಾತ್: ಮೊರಾಕ್ಕೊದಲ್ಲಿ ಶುಕ್ರವಾರ ರಾತ್ರಿ 6.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು 632 ಜನರು ಮೃತಪಟ್ಟಿದ್ದು ಸಾವಿರಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಅಲ್ಲಿನ ಅಧಿಕಾರಿಗಳು ಹೇಳಿದ್ದಾರೆ.

ಮರ್ರಾಕೆಚ್ನ ನೈಋತ್ಯಕ್ಕೆ 71 ಕಿ.ಮೀಟರ್ ದೂರದಲ್ಲಿ ಭೂಮಿಯಿಂದ 18 ಕಿ,ಮೀಟರ್ ಕಂಪನದ ಕೇಂದ್ರ ಬಿಂದು ದಾಖಲಾಗಿದೆ ಎಂದು ಅಮೆರಿಕದ ಭೂವೈಜ್ಞಾನಿಕ ಇಲಾಖೆ ತಿಳಿಸಿದೆ.

ಘಟನೆಯಲ್ಲಿ ಸಾವಿರಾರು ಜನರು ಗಾಯಗೊಂಡಿದ್ದಾರೆ. ಮನೆಗಳು, ಕಟ್ಟಡಗಳ ಅವಶೇಷಗಳ ಅಡಿಯಲ್ಲಿ ಹಲವಾರು ಜನರು ಸಿಲುಕಿಕೊಂಡಿದ್ದು ರಕ್ಷಣಾ ಕಾರ್ಯಗಳು ಭರದಿಂದ ನಡೆಯುತ್ತಿವೆ. ಸಾವು ನೋವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಗಳಿಗೆ ಎಂದು ಮೊರಾಕ್ಕೊ ಪೊಲೀಸರು ಹೇಳಿದ್ದಾರೆ.

ಮರ್ರಾಕೆಚ್ನ ನೈಋತ್ಯ ಭಾಗ ಭೂಕಂಪನಕ್ಕೆ ಗುರಿಯಾಗುವ ಪ್ರದೇಶವಾಗಿದೆ. 2004ರಲ್ಲಿ ಈಶಾನ್ಯ ಮೊರಾಕ್ಕೊದಲ್ಲಿ ಸಂಭವಿಸಿದ ಭೂಕಂಪದಲ್ಲಿ 628 ಮಂದಿ ಮೃತಪಟ್ಟಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.