ಎನ್‌ಜಾಮಿನಾ: ಲಿಬಿಯಾ ಗಡಿಗೆ ಹೊಂದಿಕೊಂಡಿರುವ ಮಧ್ಯ ಆಫ್ರಿಕಾದ ಚಾಡ್ ದೇಶದ ಉತ್ತರದಲ್ಲಿರುವ ಚಿನ್ನದ ಗಣಿಯಲ್ಲಿ ನಡೆದ ಹಿಂಸಾಚಾರದಲ್ಲಿ ಸುಮಾರು 100 ಮಂದಿ ಕಾರ್ಮಿಕರು ಮೃತಪಟ್ಟಿದ್ದಾರೆ.

ಕೌರಿ ಬೌಗೌಡಿ ಜಿಲ್ಲೆಯಪರ್ವತದಲ್ಲಿನ ಚಿನ್ನದ ಗಣಿಗಾರಿಕೆ ಸ್ಥಳದಲ್ಲಿಮೇ 23 ಮತ್ತು ಮೇ 24ರಂದು ರಾತ್ರಿ ವೇಳೆ ಹಿಂಸಾಚಾರ ಭುಗಿಲೆದ್ದಿತ್ತು. ಘಟನಾ ಸ್ಥಳ ತಲುಪುವಷ್ಟರಲ್ಲಿ ಸಾವಿನ ಸಂಖ್ಯೆ ನೂರಕ್ಕೆ ಮುಟ್ಟಿತ್ತು ಎಂದುರಕ್ಷಣಾ ಸಚಿವ ದೌದ್ ಯಾಯಾ ಬ್ರಾಹಿಂ ಸೋಮವಾರ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.

ಎಲ್ಲ ಅಕ್ರಮ ಗಣಿಗಾರಿಕೆಗಳನ್ನು ಸ್ಥಗಿತಗೊಳಿಸಲಾಗಿದೆ. ಸ್ಥಳದಿಂದ ಕಾರ್ಮಿಕರನ್ನು ಸ್ಥಳಾಂತರಿಸಲಾಗುತ್ತಿದೆ ಎಂದು ಅವರು ಹೇಳಿದರು.

ಘಟನೆಯ ಸತ್ಯಶೋಧನೆ ಮತ್ತು ಶಾಂತಿ ಸ್ಥಾಪನೆಗೆಚಾಡ್ ಸರ್ಕಾರವು ಮೇ 25ರಂದೇ ಘಟನಾ ಸ್ಥಳಕ್ಕೆ ಕಾರ್ಯಾಚರಣೆ ತಂಡವನ್ನು ಕಳುಹಿಸಿತ್ತು. ಆದರೆ, ಮೃತಪಟ್ಟವರ ಮತ್ತು ಗಾಯಗೊಂಡವರ ಬಗ್ಗೆ ನಿಖರ ಮಾಹಿತಿ ಸಿಕ್ಕಿರಲಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.