ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಹಿಂಸಾಚಾರ ಪೀಡಿತ ಬಾಂಗ್ಲಾದೇಶದಿಂದ ಭಾರತಕ್ಕೆ ಮರಳಿದ 6,700 ವಿದ್ಯಾರ್ಥಿಗಳು

Published 25 ಜುಲೈ 2024, 13:13 IST
Last Updated 25 ಜುಲೈ 2024, 13:13 IST
ಅಕ್ಷರ ಗಾತ್ರ

ನವದೆಹಲಿ: ಹಿಂಸಾಚಾರ ಪೀಡಿತ ಬಾಂಗ್ಲಾದೇಶದಿಂದ ಸುಮಾರು 6,700 ಭಾರತೀಯ ವಿದ್ಯಾರ್ಥಿಗಳು ತಾಯ್ನಾಡಿಗೆ ಮರಳಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.

ವಿವಾದಾತ್ಮಕ ಉದ್ಯೋಗ ಕೋಟಾ ವ್ಯವಸ್ಥೆಯನ್ನು ರದ್ದುಗೊಳಿಸಬೇಕು. ಅರ್ಹತೆ ಆಧರಿಸಿಯೇ ಸರ್ಕಾರಿ ಉದ್ಯೋಗ ನೀಡಬೇಕು ಎಂದು ಶೇಖ್‌ ಹಸೀನಾ ನೇತೃತ್ವದ ಸರ್ಕಾರವನ್ನು ಒತ್ತಾಯಿಸಿ ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಇದರಿಂದಾಗಿ ನೆರೆಯ ಬಾಂಗ್ಲಾದೇಶದಲ್ಲಿ ಮಾರಣಾಂತಿಕ ಘರ್ಷಣೆಗಳು ಉಂಟಾಗಿವೆ ಈವರೆಗೆ ಘರ್ಷಣೆಯಲ್ಲಿ 100ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ.

‘ಈವರೆಗೆ ಸುಮಾರು 6,700 ಭಾರತೀಯ ವಿದ್ಯಾರ್ಥಿಗಳು ಬಾಂಗ್ಲಾದೇಶದಿಂದ ಮರಳಿದ್ದಾರೆ’ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್‌ ಜೈಸ್ವಾಲ್‌ ತಿಳಿಸಿದ್ದಾರೆ.

1971ರಲ್ಲಿ ಪಾಕಿಸ್ತಾನದ ವಿರುದ್ಧ ಯುದ್ಧದಲ್ಲಿ ಹೋರಾಡಿದ ಯೋಧರ ಮಕ್ಕಳು ಸೇರಿದಂತೆ ನಿರ್ದಿಷ್ಟ ಗುಂಪುಗಳಿಗೆ ಸರ್ಕಾರಿ ಉದ್ಯೋಗದ ನೇಮಕಾತಿ ವೇಳೆ ಶೇ 50ರಷ್ಟು ಮೀಸಲಾತಿ ನಿಗದಿಗೊಳಿಸಿ ಬಾಂಗ್ಲಾದೇಶ ಸರ್ಕಾರ ಆದೇಶ ಹೊರಡಿಸಿತ್ತು. ಈ ನಿರ್ಧಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ವಿದ್ಯಾರ್ಥಿ ಸಂಘಟನೆಗಳು, ‘ಅರ್ಹತೆ’ಗೆ ಅನುಗುಣವಾಗಿ ನೇಮಕಾತಿ ವ್ಯವಸ್ಥೆ ಜಾರಿಗೆ ತರಬೇಕು ಎಂದು ಆಗ್ರಹಿಸಿ ಕಳೆದೊಂದು ವಾರದಿಂದ ಪ್ರತಿಭಟನೆ ನಡೆಸುತ್ತಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT