ಬೀಜಿಂಗ್ (ಎಪಿ): ‘ಚೀನಾದ ರಾಜಧಾನಿ ಬೀಜಿಂಗ್ ಸುತ್ತಮುತ್ತ ಹಲವು ದಿನಗಳಿಂದ ನಿರಂತರ ಮಳೆಯಾಗುತ್ತಿರುವ ಪರಿಣಾಮ ಕನಿಷ್ಠ 20 ಮಂದಿ ಸಾವಿಗೀಡಾಗಿದ್ದು 27 ಮಂದಿ ನಾಪತ್ತೆಯಾಗಿದ್ದಾರೆ’ ಎಂದು ಇಲ್ಲಿನ ಸರ್ಕಾರಿ ಮಾಧ್ಯಮ ಮಂಗಳವಾರ ವರದಿ ಮಾಡಿದೆ.

‘ಪ್ರವಾಹದಿಂದಾಗಿ ರೈಲು ನಿಲ್ದಾಣಗಳನ್ನು ಮುಚ್ಚಲಾಗಿದೆ. ದುರ್ಬಲ ಪ್ರದೇಶಗಳ ಸಾವಿರಾರು ಜನರನ್ನು ಶಾಲೆ ಹಾಗೂ ಜಿಮ್ಗಳಿಗೆ ಸ್ಥಳಾಂತರಿಸಲಾಗಿದೆ. ಅನೇಕ ಕಾರುಗಳು ನೀರಿನಲ್ಲಿ ಕೊಚ್ಚಿಹೋಗಿ ರಾಶಿಯಾಗಿ ಬಿದ್ದಿವೆ ಹಾಗೂ ಹಲವೆಡೆ ರಸ್ತೆಗಳಿಗೆ ಹಾನಿಯಾಗಿದೆ’ ಎಂದು ಅದು ಹೇಳಿದೆ.

ಬೀಜಿಂಗ್ನಲ್ಲಿ ಪ್ರತಿವರ್ಷ ಕಡಿಮೆ ಮಳೆಯಾಗುತ್ತದೆ. ಆದರೆ, ಈ ಬೇಸಿಗೆಯಲ್ಲಿ ನಿರಂತರವಾಗಿ ಮಳೆಯಾಗುತ್ತಿರುವುದರಿಂದ ಉತ್ತರ ಚೀನಾದ ಹಲವೆಡೆ ಪ್ರವಾಹ ಉಂಟಾಗಿ ಸಾವು ಸಂಭವಿಸಿದೆ. ‘ಪ್ರವಾಹದಲ್ಲಿ ಸಿಲುಕಿರುವ ಜನರ ರಕ್ಷಣೆಗೆ ಹಾಗೂ ಆಸ್ತಿ ಪಾಸ್ತಿಯ ಹಾನಿಯನ್ನು ತಡೆಗಟ್ಟಲು ಕೂಡಲೇ ಎಲ್ಲರೂ ಕಾರ್ಯಪ್ರವೃತ್ತರಾಗಬೇಕು’ ಎಂದು ಸ್ಥಳಿಯ ಆಡಳಿತಗಳಿಗೆ ಅಧ್ಯಕ್ಷ ಷಿ ಜಿನ್ಪಿಂಗ್ ಆದೇಶಿಸಿದ್ದಾರೆ.

‘ಬೀಜಿಂಗ್ನ ಪಶ್ಚಿಮದಲ್ಲಿರುವ ಪರ್ವತಗಳಲ್ಲಿ ಪ್ರವಾಹದಿಂದ 11 ಮಂದಿ ಸಾವಿಗೀಡಾಗಿದ್ದಾರೆ. ಹೆಬೈ ಪ್ರಾಂತ್ಯದಲ್ಲಿ ಒಂಬತ್ತು ಮಂದಿ ಮೃತಪಟ್ಟಿದ್ದಾರೆ. ಪ್ರವಾಹದಿಂದ 5 ಲಕ್ಷಕ್ಕೂ ಹೆಚ್ಚು ಮಂದಿ ಸಂಕಷ್ಟಕ್ಕೆ ಸಿಲುಕಿದ್ದಾರೆ’ ಎಂದು ಸರ್ಕಾರಿ ಮಾಧ್ಯಮ ಸಂಸ್ಥೆ ಸಿಸಿಟಿವಿ ಹೇಳಿದೆ. ಆದರೆ, ಇಲ್ಲಿಯವರೆಗೆ ಎಷ್ಟು ಮಂದಿಯನ್ನು ಸ್ಥಳಾಂತರಿಸಲಾಗಿದೆ ಎಂಬ ಬಗ್ಗೆ ಅದು ಮಾಹಿತಿ ನೀಡಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.