ಬೈರೂತ್: ಟರ್ಕಿ ಗಡಿಗೆ ಸಮೀಪದಲ್ಲಿರುವ ಸಿರಿಯಾದ ಅಜಾಜ್ನ ಜನನಿಬಿಡ ಸ್ಥಳದಲ್ಲಿ ಶನಿವಾರ ತಡರಾತ್ರಿ ನಡೆದ ಬಾಂಬ್ ಸ್ಫೋಟದಲ್ಲಿ ಕನಿಷ್ಠ 7 ಜನರು ಮೃತಪಟ್ಟಿದ್ದು, ಮೂವತ್ತು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

‘ಅಲೆಪ್ಪೊ ಪ್ರಾಂತ್ಯದ ಅಜಾಜ್ನ ಜನಪ್ರಿಯ ಮಾರುಕಟ್ಟೆಯ ಮಧ್ಯದಲ್ಲಿ ಬಾಂಬ್ ಸ್ಫೋಟಗೊಂಡಿದ್ದು, ಅಪಾರ ಪ್ರಮಾಣದ ಹಾನಿಯಾಗಿದೆ. ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ ಎಂದು ಸಿರಿಯಾದ ಮಾನವ ಹಕ್ಕುಗಳ ವೀಕ್ಷಣಾಲಯ ತಿಳಿಸಿದೆ.

2011ರಿಂದ 9 ವರ್ಷಗಳ ಕಾಲ ನಡೆದ ಯುದ್ಧದಲ್ಲಿ ಸುಮಾರು 38 ಲಕ್ಷ ಜನರು ಮೃತಪಟ್ಟಿದ್ದರು. ಟರ್ಕಿ ಬೆಂಬಲಿತ ಬಂಡುಕೋರ ಗುಂಪುಗಳು ಮತ್ತು ಅಮೆರಿಕ ಬೆಂಬಲಿತ ಕುರ್ದಿಶ್ ಪಡೆ ಸಿರಿಯಾದ ಹಲವು ಸ್ಥಳಗಳನ್ನು ಆಕ್ರಮಿಸಿಕೊಂಡಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.