ಢಾಕಾ: ಭಾರತದಲ್ಲಿ ನಾಪತ್ತೆಯಾಗಿದ್ದ ಬಾಂಗ್ಲಾದೇಶದ ಸಂಸದ ಅನ್ವರುಲ್ ಅಜೀಂ ಅನಾರ್ ಅವರ ಮೃತದೇಹ ಕೋಲ್ಕತ್ತದಲ್ಲಿ ಪತ್ತೆಯಾಗಿದ್ದು, ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.

‘ಅವಾಮಿ ಲೀಗ್‌ನ ಸಂಸದ ಅನ್ವರುಲ್ ಅವರು ಕೋಲ್ಕತ್ತದ ಫ್ಲಾಟ್‌ವೊಂದರಲ್ಲಿ ಕೊಲೆಯಾಗಿದ್ದಾರೆ. ಕೊಲೆ ಮಾಡಿದ ಆರೋಪಿಗಳೆಲ್ಲರೂ ಬಾಂಗ್ಲಾದೇಶದ ಪ್ರಜೆಗಳಾಗಿದ್ದು, ಇದೊಂದು ಯೋಜಿತ ಕೃತ್ಯವಾಗಿದೆ’ ಎಂದು ಬಾಂಗ್ಲಾದೇಶದ ಗೃಹ ಸಚಿವ ಅಸಾದುಜ್ಮಾನ್ ಖಾನ್ ಅವರು ಬುಧವಾರ ತಿಳಿಸಿದ್ದಾರೆ.

'ಮೂರನೇ ಬಾರಿಗೆ ಸಂಸದರಾಗಿರುವ ಅನ್ವರುಲ್ ಅವರು ಚಿಕಿತ್ಸೆಗಾಗಿ ಮೇ 12ರಂದು ಭಾರತಕ್ಕೆ ಬಂದಿದ್ದರು. ಅನ್ವರುಲ್ ಅವರು ನಾಪತ್ತೆಯಾಗಿರುವ ಬಗ್ಗೆ ಮೇ 18ರಂದು ಕೋಲ್ಕತ್ತದಲ್ಲಿ ಪ್ರಕರಣ ದಾಖಲಾಗಿತ್ತು’ ಎಂದು ದ ಡೈಲಿ ಸ್ಟಾರ್ ಮಾಧ್ಯಮ ವರದಿ ಮಾಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.