ಢಾಕಾ: ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆದ ದೌರ್ಜ್ಯನ್ಯಗಳ ನಡುವೆಯೇ ಢಾಕಾದಲ್ಲಿನ ವಿಶ್ವವಿದ್ಯಾಲಯದ ಹಿಂದೂ ಕ್ಯಾಂಟೀನ್ಗೆ ನುಗ್ಗಿದ ವಿದ್ಯಾರ್ಥಿಗಳ ಗುಂಪೊಂದು ಗೋಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿದೆ.

ಇದರ ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿವೆ.

ವಿದ್ಯಾರ್ಥಿಗಳ ಗುಂಪು ಹಸುವೊಂದನ್ನು ಕ್ಯಾಂಟೀನ್ ಒಳಕ್ಕೆ ತಂದು ಗೋಮಾಂಸ ನೀಡುವಂತೆ ಒತ್ತಾಯಿಸಿದೆ. ಇಲ್ಲದಿದ್ದರೆ ಕ್ಯಾಂಟೀನ್ನ ಒಳಗೇ ಹಸುವನ್ನು ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿರುವ ವಿಡಿಯೊವೊಂದು ಹರಿದಾಡುತ್ತಿದೆ. ಢಾಕಾ ವಿವಿಯ ಕ್ಯಾಂಟೀನ್ ಹಿಂದೂ ವ್ಯಕ್ತಿಗೆ ಸೇರಿದ್ದು, ಅಲ್ಲಿ ಗೋಮಾಂಸ ಸೇವನೆಗೆ ಅವಕಾಶ ಇಲ್ಲ ಎನ್ನಲಾಗಿದೆ. ಇದನ್ನು ವಿರೋಧಿಸಿರುವ ಮುಸ್ಲಿಂ ವಿದ್ಯಾರ್ಥಿಗಳು ಬೆದರಿಕೆ ಹಾಕಿದ್ದಾರೆ ಎಂದು ವರದಿಯಾಗಿದೆ.

ಹಸೀನಾ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿದ ಬಳಿಕ ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ದಾಳಿ ಹೆಚ್ಚುತ್ತಿದೆ ಎನ್ನಲಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಡಿಯೊಗಳು ಅಲ್ಪಸಂಖ್ಯಾತ ಹಿಂದೂಗಳ ಭಾವನೆಗಳಿಗೆ ಘಾಸಿಗೊಳಿಸುವ ಕಳವಳ ಹೆಚ್ಚಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.