ಬ್ರೆಸಿಲಿಯಾ (ಬ್ರೆಜಿಲ್): ಬ್ರೆಜಿಲ್ನ ಮಾಜಿ ಅಧ್ಯಕ್ಷ, ಬಲಪಂಥೀಯ ನಾಯಕ ಜೈರ್ ಬೋಲ್ಸನಾರೊ ಅವರ ಬೆಂಬಲಿಗರು ಭಾನುವಾರ ರಾಷ್ಟ್ರಪತಿ ಭವನ, ಸುಪ್ರೀಂ ಕೋರ್ಟ್ ಮತ್ತು ಸಂಸತ್ ಮೇಲೆ ದಾಳಿ ನಡೆಸಿದ್ದಾರೆ.

ಬ್ರೆಜಿಲ್ನ ಧ್ವಜದ ಬಣ್ಣವುಳ್ಳ (ಹಳದಿ, ಹಸಿರು) ಅಂಗಿ ತೊಟ್ಟಿದ್ದ ಪ್ರತಿಭಟನಾಕಾರರು ಭಾನುವಾರ ರಾಜಧಾನಿ ಬ್ರೆಸಿಲಿಯಾದಲ್ಲಿ ದಾಂಧಲೆ ನಡೆಸಿದರು .

ಪ್ರತಿಭಟನಾಕಾರರು ರಾಷ್ಟ್ರಪತಿ ಭವನವನ್ನು ಸುತ್ತುವರಿದು ಆತಂಕ ಮೂಡಿಸಿದರು. ಪೊಲೀಸರು ಅಶ್ರುವಾಯು ಪ್ರಯೋಗಿಸಿ ಅವರನ್ನು ಚದುರಿಸುವ ಪ್ರಯತ್ನ ಮಾಡಿದರು.

ಬೋಲ್ಸನಾರೊ ಅವರ ಇತ್ತೀಚಿನ ಚುನಾವಣಾ ಸೋಲನ್ನು ಒಪ್ಪಿಕೊಳ್ಳಲು ನಿರಾಕರಿಸಿರುವ ಪ್ರತಿಭಟನಾಕಾರರು, ಸರ್ಕಾರಿ ಕಟ್ಟಡಗಳ ಮೇಲೆ ದಾಳಿ ನಡೆಸುವ ಮೂಲಕ ಪ್ರತಿಕಾರದ ಕ್ರಮಕ್ಕೆ ಮುಂದಾಗಿದ್ದಾರೆ ಎನ್ನಲಾಗಿದೆ.

2022ರ ಅಕ್ಟೋಬರ್ 31 ರಂದು ನಡೆದ ಚುನಾವಣೆಯಲ್ಲಿ ಬೋಲ್ಸನಾರೊ ಅವರನ್ನು ಎಡಪಂಥೀಯ ನಾಯಕ ಲೂಯಿಸ್ ಇನಾಸಿಯೊ ಲುಲಾ ಡಾ ಸಿಲ್ವಾ ಅವರು ಕಡಿಮೆ ಅಂತರದಿಂದ ಸೋಲಿಸಿ ಅಧಿಕಾರಕ್ಕೆರಿದ್ದರು. ಅದಾದ ಒಂದು ವಾರದಲ್ಲೇ ಈ ಗಲಭೆಗಳು ಭುಗಿಲೆದ್ದಿವೆ.

ಲುಲಾ ಅವರು ಈ ಹಿಂದೆ ಜನವರಿ 2003ರಿಂದ ಡಿಸೆಂಬರ್ 2010ರ ವರೆಗೆ ಅಧ್ಯಕ್ಷರಾಗಿದ್ದರು.

ಬೋಲ್ಸನಾರೊ ಅವರನ್ನೇ ಮತ್ತೆ ಅಧಿಕಾರದಲ್ಲಿ ಮುಂದುವರಿಸಬೇಕು. ಅಧ್ಯಕ್ಷ ಲೂಯಿಜ್ ಇನಾಸಿಯೊ ಲುಲಾ ಡಾ ಸಿಲ್ವಾ ಅವರನ್ನು ಪದಚ್ಯುತಿಗೊಳಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

ಘಟನೆ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ ಕಾನೂನು ಸಚಿವ ಫ್ಲೇವಿಯೊ ಡಿನೋ, ‘ಇದುವರೆಗೆ ಕನಿಷ್ಠ 200 ಗಲಭೆಕೋರರನ್ನು ಬಂಧಿಸಲಾಗಿದೆ ಮತ್ತು ಭದ್ರತಾ ಪಡೆಗಳು ಪ್ರತಿಭಟನಾಕಾರರನ್ನು ಹೊರಹಾಕುವಲ್ಲಿ ಯಶಸ್ವಿಯಾಗಿವೆ. ಕಾಂಗ್ರೆಸ್ (ಸಂಸತ್ತು), ಸುಪ್ರೀಂ ಕೋರ್ಟ್ ಮತ್ತು ಅಧ್ಯಕ್ಷೀಯ ಭವನ ಮತ್ತು ಸುತ್ತಮುತ್ತಲಿನ ಪರಿಸ್ಥಿತಿ ನಿಯಂತ್ರಣದಲ್ಲಿದೆ’ ಎಂದು ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಬೇಸರ

ಬ್ರೆಜಿಲ್ನ ಮಾಜಿ ಅಧ್ಯಕ್ಷ ಜೈರ್ ಬೋಲ್ಸನಾರೊ ಅವರ ಬೆಂಬಲಿಗರು ಭಾನುವಾರ ಬ್ರೆಸಿಲಿಯಾದಲ್ಲಿ ನಡೆಸಿದ ದಾಂಧಲೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಟ್ವೀಟ್ ಮಾಡಿ ಬೇಸರ ವ್ಯಕ್ತಪಡಿಸಿದ್ದಾರೆ. ‘ಬ್ರೆಸಿಲಿಯಾದಲ್ಲಿ ಸರ್ಕಾರಿ ಕಟ್ಟಡಗಳ ಮೇಲೆ ನಡೆದ ದಾಳಿ ಬಗ್ಗೆ ತೀವ್ರ ಕಳವಳವಾಗಿದೆ. ಪ್ರಜಾಪ್ರಭುತ್ವ ಸಂಪ್ರದಾಯಗಳನ್ನು ಪ್ರತಿಯೊಬ್ಬರೂ ಗೌರವಿಸಬೇಕು’ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ

ಬ್ರೆಜಿಲ್ ಅಧ್ಯಕ್ಷರಾಗಿ ಲುಲಾ ಆಯ್ಕೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.