ಲಾಹೋರ್: ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಮಂಗಳವಾರ ಸಿಲಿಂಡರ್ ಸ್ಫೋಟಗೊಂಡು ಮೂರಂತಸ್ತಿನ ಕಟ್ಟಡ ಕುಸಿದು 9 ಮಂದಿ ಸಜೀವ ದಹನವಾಗಿದ್ದಾರೆ

ಲಾಹೋರ್‌ನಿಂದ 350 ಕಿ.ಮೀ ದೂರದಲ್ಲಿರುವ ಹರಾಮ್ ಗೇಟ್ ಮುಲ್ತಾನ್ ನಗರದಲ್ಲಿ ಘಟನೆ ನಡೆದಿದೆ ಎಂದು ಪೊಲಿಸರು ತಿಳಿಸಿದ್ದಾರೆ.

ಪ್ರಾಥಮಿಕ ತನಿಖೆಯಲ್ಲಿ, ಸಿಲಿಂಡರ್ ಸ್ಫೋಟದಿಂದಾಗಿ ಕಟ್ಟಡ ಕುಸಿದಿದೆ ಎನ್ನುವುದು ತಿಳಿದುಬಂದಿದೆ, ಹೆಚ್ಚಿನ ಮಾಹಿತಿಗಾಗಿ ತನಿಖೆ ನಡೆಸಲಾಗುತ್ತಿದೆ ಎಂದೂ ಅವರು ತಿಳಿಸಿದ್ದಾರೆ.

ಕಟ್ಟಡದ ಒಳಗೆ ಒಟ್ಟು 11 ಮಂದಿ ಸಿಲುಕಿದ್ದರು. ಅವರಲ್ಲಿ 9 ಮಂದಿ ಮೃತಪಟ್ಟಿದ್ದಾರೆ, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪಂಜಾಬ್ ಪ್ರಾಂತ್ಯದ ತುರ್ತು ಸೇವಾ ರಕ್ಷಣಾ ತಂಡದ ಸಿಬ್ಬಂದಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.