ಮನಾಮ: ಬಹ್ರೇನ್‌ನ ಶಾಪಿಂಗ್ ಮಾಲ್‌ವೊಂದರಲ್ಲಿ ಇರಿಸಲಾಗಿದ್ದ ಹಿಂದೂ ದೇವರ ಮೂರ್ತಿಗಳನ್ನು ಬುರ್ಖಾಧಾರಿ ಮಹಿಳೆಯೊಬ್ಬರು ಕೆಳಗೆ ಬೀಳಿಸಿ ಛಿದ್ರಗೊಳಿಸುತ್ತಿರುವ ವಿಡಿಯೊವೊಂದು ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿದೆ.

ಬಹ್ರೇನ್‌ನ ಜುಫೈರ್ ಎಂಬಲ್ಲಿನ ಶಾಪಿಂಗ್ ಮಾಲ್‌ನಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ವಿಡಿಯೊ ವೈರಲ್ ಆಗಿರುವ ಹಿನ್ನೆಲೆಯಲ್ಲಿ, ಶಾಪಿಂಗ್ ಮಾಲ್‌ಗೆ ಹಾನಿಗೊಳಿಸಿದ ಮತ್ತು ನಿರ್ದಿಷ್ಟ ಸಮುದಾಯವೊಂದರ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಅಡಿಯಲ್ಲಿ ಪೊಲೀಸರು 54 ವರ್ಷದ ಮಹಿಳೆಯೊಬ್ಬರಿಗೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಈ ಕುರಿತು ಬಹ್ರೇನ್‌ನ ಸುದ್ದಿ ಮಾಧ್ಯಮ ‘ಗಲ್ಫ್ ಡೈಲಿ ನ್ಯೂಸ್’ ವರದಿ ಮಾಡಿದೆ.

ಗಣಪತಿ ಮೂರ್ತಿಗಳನ್ನು ಛಿದ್ರಗೊಳಿಸುತ್ತಿರುವ ವಿಡಿಯೊ ಸಾಮಾಜಿಕ ತಾಣದಲ್ಲಿ ವೈರಲ್ ಆಗಿದ್ದು, ಮಹಿಳೆಯ ಕೃತ್ಯಕ್ಕೆ ಪರ ವಿರೋಧದ ಅಭಿಪ್ರಾಯಗಳು ವ್ಯಕ್ತವಾಗಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.