ಸ್ಯಾನ್ ಫ್ರಾನ್ಸಿಸ್ಕೊ: ಈ ವರ್ಷ ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚಿನಿಂದಾಗಿ 40 ಲಕ್ಷ ಎಕರೆ ಹಾನಿಗೊಳಗಾಗಿದ್ದು, ಈವರೆಗೆ 31 ಮಂದಿ ಮೃತಪಟ್ಟಿದ್ದಾರೆ. ನೂರಕ್ಕೂ ಹೆಚ್ಚು ಮನೆಗಳು ಸುಟ್ಟುಹೋಗಿದೆ.

ಇಲ್ಲಿ ಶನಿವಾರ ದೊಡ್ಡ ಪ್ರಮಾಣದಲ್ಲಿ ಕಾಳ್ಗಿಚ್ಚು ಕಾಣಿಸಿಕೊಳ್ಳುವ ಸಾಧ್ಯತೆ ಇದೆ ಎಂದು ಮುನ್ನೆಚ್ಚರಿಕೆ ನೀಡಲಾಗಿದೆ.

ಶುಕ್ರವಾರವೂ ಇಲ್ಲಿ ದೊಡ್ಡ ಪ್ರಮಾಣದಲ್ಲಿ ಕಾಳ್ಗಿಚ್ಚು ಕಾಣಿಸಿಕೊಳ್ಳುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಲಾಗಿತ್ತು. ಆದರೆ ಬೆಂಕಿ ಕಾಣಿಸಿಕೊಂಡ ಸ್ಥಳದಲ್ಲಿ ಬಹಳ ಗಾಳಿ ಬೀಸದಿದ್ದ ಕಾರಣ ಅಗ್ನಿ ಶಾಮಕ ದಳ ಬೆಂಕಿ ಕಾಳ್ಗಿಚ್ಚನ್ನು ನಿಯಂತ್ರಿಸಲು ಸಹಕಾರಿಯಾಗಿದೆ.

ಇಲ್ಲಿ ತನಕ ನಾವು ನಿರೀಕ್ಷಿಸಿದ ರೀತಿಯ ವೇಗದಲ್ಲಿ ಗಾಳಿ ಬೀಸಿಲ್ಲ. ಆದರೆ ಹೆಚ್ಚಿನ ಗಾಳಿ ಬೀಸುವ ಸಾಧ್ಯತೆ ಇದೆ. ಒಂದು ವೇಳೆ ಹಾಗಾದಲ್ಲಿ ಒಣಗಿದ ಪ್ರದೇಶದಲ್ಲಿ ಬೆಂಕಿ ಹರಡಲು ಹೆಚ್ಚು ಸಮಯ ತೆಗೆದುಕೊಳ್ಳುವುದಿಲ್ಲ. ಹಾಗಾಗಿ ಜಾಗರೂಕತೆಯಿಂದ ಇರಬೇಕು ಎಂದು ಅಗ್ನಿ ಶಾಮಕ ದಳದ ಮುಖ್ಯಸ್ಥಮಾರ್ಕ್ ಬ್ರಂಟನ್ ತಿಳಿಸಿದರು.

ಹೊಸ ಸ್ಥಳದಲ್ಲಿ ಬೆಂಕಿ ಕಾಣಿಸಿಕೊಳ್ಳದಂತೆ ತಡೆಯಲು, ಬೆಂಕಿ ಇತರೆ ಸ್ಥಳಗಳಿಗೆ ಹರಡದಂತೆ ನಿಯಂತ್ರಿಸಲು ಅಗ್ನಿ ಶಾಮಕ ದಳದ ಸಿಬ್ಬಂದಿ ದೀರ್ಘ ಕಾಲದಿಂದ ಪ್ರಯತ್ನಿಸುತ್ತಿದ್ದಾರೆ.

5,000 ಕ್ಕೂ ಹೆಚ್ಚು ಜನರನ್ನೊಳಗೊಂಡಕ್ಯಾಲಿಸ್ಟೊಗಾ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಹೆಚ್ಚಿನ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.ಈ ಪ್ರಾಂತ್ಯವು ಹೆಚ್ಚಿನ ತಾಪಮಾನವನ್ನು ಹೊಂದಿರುವ ಕಾರಣಕಾಳ್ಗಿಚ್ಚುಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ ಎಂದು ಅವರು ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.