ಒಟ್ಟಾವ: ಕೆನಡಾದ ಬ್ರಾಂಪ್ಟನ್ನಲ್ಲಿರುವ ಹಿಂದೂ ಸಭಾ ದೇವಾಲಯದ ಬಳಿ ಖಾಲಿಸ್ತಾನಿ ಬೆಂಬಲಿಗರ ನಡೆಸಿದ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಪೊಲೀಸ್ ಅಧಿಕಾರಿ ಹರಿಂದರ್ ಸೋಹಿ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಖಾಲಿಸ್ತಾನ ಧ್ವಜಗಳನ್ನು ಹಿಡಿದಿದ್ದ ಪ್ರತಿಭಟನಕಾರರು ಭಾನುವಾರ ಹಿಂದೂ ದೇವಾಲಯದ ಆವರಣದೊಳಗೆ ನುಗ್ಗಿ, ಅಲ್ಲಿನ ಜನರೊಂದಿಗೆ ಘರ್ಷಣೆ ನಡೆಸಿದ್ದರು. ಜತೆಗೆ ಭಾರತೀಯ ರಾಯಭಾರಿ ಕಚೇರಿ ಆಯೋಜಿಸಿದ್ದ ಕೌನ್ಸಲರ್ ಕಾರ್ಯಕ್ರಮಕ್ಕೂ ಅಡ್ಡಿಪಡಿಸಿದ್ದರು.

ಖಾಲಿಸ್ತಾನ ಪರ ಬ್ಯಾನರ್ಗಳನ್ನು ಹಿಡಿದಿದ್ದ ಪ್ರತಿಭಟನಕಾರರು ಕೃತ್ಯದಲ್ಲಿ ಭಾಗಿಯಾಗಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ವಿಡಿಯೊಗಳಲ್ಲಿ ಇದನ್ನು ಕಾಣಬಹುದಾಗಿದೆ ಎಂದು ಪೀಲ್ ಪ್ರದೇಶದ ಪೊಲೀಸರು ತಿಳಿಸಿದ್ದಾರೆ. ದಾಳಿ ಕುರಿತ ವರದಿಯನ್ನು ಕೆನಡಾದ ಬ್ರಾಡ್ಕಾಸ್ಟಿಂಗ್ ಕಾರ್ಪೊರೇಷನ್ ಮಾಡಿದೆ.

ಹಿಂದೂ ಸಭಾ ಮಂದಿರ ದೇಗುಲದ ಆವರಣದಲ್ಲಿ ಜನರು ಕೈ ಕೈ ಮಿಲಾಯಿಸಿ, ಹೊಡೆದಾಡಿಕೊಂಡಿರುವ ದೃಶ್ಯ ವಿಡಿಯೊದಲ್ಲಿದೆ ಎಂದು ವರದಿಯಲ್ಲಿ ಹೇಳಲಾಗಿದೆ. ಪ್ರತಿಭಟನೆಯಲ್ಲಿ ಭಾಗಿಯಾದ ಆರೋಪದ ಮೇಲೆ ಪೊಲೀಸ್ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ ಸುದ್ದಿಸಂಸ್ಥೆಯೊಂದು ವರದಿ ಮಾಡಿದೆ.

ಘಟನೆಯನ್ನು ಭಾರತದ ಹೈಕಮಿಷನ್ ಮತ್ತು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿವೆ. ಅಲ್ಲದೆ ಪ್ರಧಾನಿ ನರೇಂದ್ರ ಮೋದಿ, ವಿಎಚ್ಪಿ, ಬಿಜೆಪಿ, ಕಾಂಗ್ರೆಸ್ ನಾಯಕರೂ ಖಂಡಿಸಿದ್ದಾರೆ.
.ಹಿಂದೂ ದೇಗುಲ ಬಳಿ ಘರ್ಷಣೆ: ಖಾಲಿಸ್ತಾನಿ ಬೆಂಬಲಿಗರ ಕೃತ್ಯದ ಬಗ್ಗೆ ಜೈಶಂಕರ್ ಕಳವಳ.ಭಾರತದ ರಾಜತಾಂತ್ರಿಕರನ್ನು ಬೆದರಿಸುವ ಹೇಡಿತನದ ಯತ್ನ: ಖಾಲಿಸ್ತಾನಿಗಳ ದಾಳಿಗೆ ಮೋದಿ.ಕೆನಡಾ: ಖಾಲಿಸ್ತಾನಿ ಬೆಂಬಲಿಗರಿಂದ ಹಿಂದೂ ದೇಗುಲ ಬಳಿ ಘರ್ಷಣೆ.Video: ಕೆನಡಾ ಹಿಂದೂ ದೇವಾಲಯದ ಭಕ್ತರ ಮೇಲೆ ಖಾಲಿಸ್ತಾನಿ ಪ್ರತ್ಯೇಕತಾವಾದಿಗಳ ದಾಳಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.