ಬೀಜಿಂಗ್: ಕೋವಿಡ್ ಪರಿಸ್ಥಿತಿ ಎದುರಿಸಲು ಮೂಲಸೌಕರ್ಯಗಳ ಲಭ್ಯತೆ ಸೇರಿ ವಿವಿಧ ಆಸ್ಪತ್ರೆಗಳಲ್ಲಿನ ವಸ್ತುಸ್ಥಿತಿ ಪರಿಶೀಲಿಸಲು ಪ್ರಾಂತೀಯ ಸರ್ಕಾರಗಳಿಗೆ ಚೀನಾ ಸೂಚಿಸಿದೆ.

ಕೋವಿಡ್ ಸ್ಥಿತಿ ಗತಿಯ ನಿರ್ವಹಣೆಯಲ್ಲಿ ಹೆಚ್ಚಿನ ಪಾರದರ್ಶಕತೆ ಅಗತ್ಯ ಎಂದು ಜಾಗತಿಕವಾಗಿ ಕೇಳಿಬಂದ ಒತ್ತಾಯದ ಹಿನ್ನೆಲೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಕೋವಿಡ್ ಮಾಹಿತಿಗೆ ಸಂಬಂಧಿಸಿ ಪಾರದರ್ಶಕತೆ ಕಾಯ್ದುಕೊಳ್ಳಬೇಕು. ಸಾವು ಪ್ರಕರಣಗಳ ಮಾಹಿತಿ ಬಹಿರಂಗಪಡಿಸಬೇಕು ಎಂದು ವಿವಿಧ ರಾಷ್ಟ್ರಗಳು, ಆರೋಗ್ಯ ಕ್ಷೇತ್ರದ ಪ್ರಮುಖರು ಚೀನಾಗೆ ಒತ್ತಾಯಿಸಿದ್ದರು.

ವಿಶ್ವ ಆರೋಗ್ಯ ಸಂಘಟನೆಯ ಸಲಹೆಗಾರರೂ ಇತ್ತೀಚೆಗೆ ಕೋವಿಡ್ ರೋಗ, ಸಾಂಕ್ರಾಮಿಕದ ಉಗಮ ಕುರಿತ ಮಾಹಿತಿಗಳನ್ನು ಬಹಿರಂಗಪಡಿಸಬೇಕು ಎಂದು ಆಗ್ರಹಪಡಿಸಿದ್ದರು.

ಈ ಹಿನ್ನೆಲೆಯಲ್ಲಿ ಚೀನಾದ ರಾಷ್ಟ್ರೀಯ ಆರೋಗ್ಯ ಆಯೋಗ ಹೊಸ ನಿಯಮಗಳನ್ನು ಪ್ರಕಟಿಸಿದೆ. ಪ್ರಾಂತೀಯ ಆಡಳಿತಗಳು ಆಸ್ಪತ್ರೆಗಳಲ್ಲಿ ನಿಯಮಿತವಾಗಿ ಪರಿಶೀಲಿಸಬೇಕು. ಸಮಗ್ರ ಮಾಹಿತಿ ನೀಡಬೇಕು ಎಂದು ಸೂಚಿಸಿದೆ.

ಪ್ರಕರಣ ಮುಚ್ಚಿಡಲಾಗಿದೆಯೇ, ವರದಿ ವಿಳಂಬವಾಗಿದೆಯೇ, ತಪ್ಪಾಗಿ ವರದಿ ಮಾಡಲಾಗಿದೆಯೇ ಎಂದೂ ಮಾಹಿತಿ ನೀಡಲು ಕೋರಿದೆ. ವೈದ್ಯಕೀಯ ತ್ಯಾಜ್ಯದ ವಿಲೇವಾರಿ, ನಿರ್ವಹಣೆ ಕುರಿತ ಮಾಹಿತಿಗಳನ್ನು ಒದಗಿಸಲು ಸೂಚಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.