ವಾಷಿಂಗ್ಟನ್: ಭಾರತದ ಸೇನಾ ಸಾಮರ್ಥ್ಯವನ್ನು ಹೆಚ್ಚಿಸುವ ಮೂಲಕ ಇಂಡೊ–ಪೆಸಿಫಿಕ್ ಪ್ರದೇಶದಲ್ಲಿ ಸ್ಥಿರವಾದ ಅಧಿಕಾರದ ಸಮತೋಲನ ಸಾಧಿಸಲು ಉಭಯ ರಾಷ್ಟ್ರಗಳು ಒಟ್ಟಾಗಿ ಕೆಲಸ ಮಾಡಬಹುದು ಎಂದು ಅಮೆರಿಕದ ರಕ್ಷಣಾ ಕಾರ್ಯದರ್ಶಿ ಲಾಯ್ಡ್ ಆಸ್ಟಿನ್ ಸಂಸದರಿಗೆ ತಿಳಿಸಿದರು.

ರಕ್ಷಣಾ ಇಲಾಖೆಯ ವಾರ್ಷಿಕ ಬಜೆಟ್ ಕುರಿತ ಸಭೆ ವೇಳೆ ಮಾತನಾಡಿದ ಅವರು, ಇಂಡೊ–ಪೆಸಿಫಿಕ್ ಪ್ರದೇಶದಲ್ಲಿ ಭದ್ರತೆಯನ್ನು ಹೆಚ್ಚಿಸಲು ಭಾರತ–ಅಮೆರಿಕ ಸೇನೆಗಳ ಕಾರ್ಯ ಚಟುವಟಿಕೆಗಳಿಗೆ ವೇಗ ನೀಡಬೇಕು ಎಂದು ಅಭಿಪ್ರಾಯಪಟ್ಟರು.

‘ಈ ಬಜೆಟ್ ಮೂಲಕ ಅಮೆರಿಕ–ಭಾರತದ ಬಾಂಧವ್ಯದ ಹೊಸ ಅಧ್ಯಾಯ ಆರಂಭವಾಗುತ್ತಿದೆ’ ಎಂದು ಹೇಳಿದರು.

‘ಇಂಡೊ–ಪೆಸಿಫಿಕ್ ಪ್ರದೇಶದಲ್ಲಿ ಭದ್ರತೆ ಹೆಚ್ಚಿಸಲು ಉಭಯ ದೇಶಗಳ ಸೇನೆಯ ಜಂಟಿ ಸಮರಾಭ್ಯಾಸ, ಮಾಹಿತಿ ವಿನಿಮಯ ಮತ್ತು ಇತರೆ ಕಾರ್ಯ ಚಟುವಟಿಕೆಗಳಿಗೆ ವೇಗ ನೀಡುತ್ತಿವೆ. ಬೆಳೆಯುತ್ತಿರುವ ಭಾರತ–ಅಮೆರಿಕ ಪಾಲುದಾರಿಕೆಯನ್ನು ಬೆಂಬಲಿಸಲು ನಾವು ಬದ್ಧರಾಗಿದ್ದೇವೆ’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.