ಹವಾನಾ: ಲಾಕ್ಡೌನ್ನಿಂದ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ದ್ವೀಪ ರಾಷ್ಟ್ರ ಕ್ಯೂಬಾದಲ್ಲಿ ಚೇತರಿಕೆ ತರುವ ನಿಟ್ಟಿನಲ್ಲಿ ಸೋಮವಾರ ಕೊರೊನಾ ವೈರಸ್ ಲಾಕ್ಡೌನ್ ನಿರ್ಬಂಧಗಳನ್ನು ಸಡಿಲಗೊಳಿಸಲಾಗಿದೆ. ಹವಾನಾ ಹೊರತು ಪಡಿಸಿ ದ್ವೀಪದ ಉಳಿದ ಎಲ್ಲ ಭಾಗಗಳಿಗೂ ಪ್ರವಾಸಿಗರು ಹಾಗೂ ಸ್ಥಳೀಯರ ಸಂಚಾರಕ್ಕೆ ಅವಕಾಶ ನೀಡಲಾಗಿದೆ.

ಮುಖಗವಸು ಧರಿಸುವುದು, ಅಂತರ ಕಾಯ್ದುಕೊಳ್ಳುವುದು ಕಡ್ಡಾಯವಾಗಿದೆ. 1.1 ಕೋಟಿಗೂ ಹೆಚ್ಚು ಜನ ಸಂಖ್ಯೆ ಇರುವ ಕ್ಯೂಬಾದಲ್ಲಿ ಒಟ್ಟು 6,000 ಕೋವಿಡ್ ಪ್ರಕರಣಗಳು ದಾಖಲಾಗಿವೆ ಹಾಗೂ ಸೋಂಕಿನಿಂದ ಈವರೆಗೂ 120 ಜನ ಸಾವಿಗೀಡಾಗಿದ್ದಾರೆ.

ಜಗತ್ತಿನಾದ್ಯಂತ 3.80 ಕೋಟಿಗೂ ಅಧಿಕ ಜನರು ಕೋವಿಡ್-19 ಸೋಂಕಿಗೆ ಒಳಗಾಗಿದ್ದರೆ, 10.85 ಲಕ್ಷಕ್ಕೂ ಹೆಚ್ಚು ಜನರು ಮೃತಪಟ್ಟಿರುವುದು ವರ್ಡೊ ಮೀಟರ್ ವೆಬ್ಸೈಟ್ನಿಂದ ತಿಳಿದು ಬಂದಿದೆ.

ಈವರೆಗೆ ಜಗತ್ತಿನಾದ್ಯಂತ 2.86 ಕೋಟಿಗೂ ಹೆಚ್ಚು ಸೋಂಕಿತರು ಗುಣಮುಖರಾಗಿದ್ದಾರೆ. ಒಟ್ಟು 83,52,289 ಕೊರೊನಾ ಸೋಂಕು ಪ್ರಕರಣಗಳು ಸಕ್ರಿಯವಾಗಿವೆ.

ಕೊರೊನಾ ಸೋಂಕಿಗೆ ಒಳಗಾಗಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈಗ ಚುನಾವಣಾ ಪ್ರಚಾರದ ಬಹಿರಂಗ ಸಭೆಗಳಲ್ಲಿ ಭಾಗಿಯಾಗುತ್ತಿದ್ದಾರೆ. ಈಗ ಅವರಿಗೆ ಕೋವಿಡ್–19 ನೆಗೆಟಿವ್ ಬಂದಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಸೋಂಕಿನ ವಿರುದ್ಧ ರೋಗ ನಿರೋಧ ಶಕ್ತಿ ಬೆಳೆಸಿಕೊಂಡಿರುವುದಾಗಿ ಟ್ರಂಪ್ ಹೇಳಿಕೊಂಡಿದ್ದಾರೆ.

ಸೋಂಕು ಪ್ರಕರಣಗಳ ಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿರುವ ಅಮೆರಿಕದಲ್ಲಿ ಒಟ್ಟು 80,37,789 ಜನರಿಗೆ ಕೋವಿಡ್-19 ದೃಢಪಟ್ಟಿದೆ. ಈವರೆಗೂ 2,20,011 ಮಂದಿ ಸಾವಿಗೀಡಾಗಿದ್ದಾರೆ. 51,84,615 ಜನರು ಈ ವರೆಗೆ ಚೇತರಿಸಿಕೊಂಡಿದ್ದಾರೆ.

ಸೋಂಕು ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿರುವ ಭಾರತದಲ್ಲಿ 71,75,880 ಪ್ರಕರಣಗಳು, ಬ್ರೆಜಿಲ್ನಲ್ಲಿ 51,03,408, ರಷ್ಯಾದಲ್ಲಿ 13,12,310, ಕೊಲಂಬಿಯಾದಲ್ಲಿ 9,19,083, ಪೆರುವಿನಲ್ಲಿ 8,51,171, ಇಂಗ್ಲೆಂಡ್ನಲ್ಲಿ 6,17,688, ಸ್ಪೇನ್ನಲ್ಲಿ 9,18,223 ಮತ್ತು ಮೆಕ್ಸಿಕೊದಲ್ಲಿ 8,21,045 ಕೊರೊನಾ ಸೋಂಕು ಪ್ರಕರಣಗಳು ದಾಖಲಾಗಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.