ವಾಷಿಂಗ್ಟನ್: ಲಕ್ಷಾಂತರ ಫೇಸ್‌ಬುಕ್ ಬಳಕೆದಾರರ ಮಾಹಿತಿಯನ್ನು ಅಕ್ರಮವಾಗಿ ಸಂಗ್ರಹಿಸಿ, ಮಾರಾಟ ಮಾಡಿದ ಕೇಂಬ್ರಿಡ್ಜ್ ಅನಾಲಿಟಿಕಾ ಹಗರಣದಲ್ಲಿ ಮೇಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಅವರನ್ನು ಹೊಣೆಗಾರರನ್ನಾಗಿ ಪರಿಗಣಿಸಬೇಕೆಂದು ಕೋರಿ ಕೊಲಂಬಿಯಾ ಜಿಲ್ಲಾ ನ್ಯಾಯಾಲಯದಲ್ಲಿ ದಾವೆ ಹೂಡಲಾಗಿದೆ.

ಕೊಲಂಬಿಯಾ ಜಿಲ್ಲಾ ನ್ಯಾಯಾಲಯದ ಅಟಾರ್ನಿ ಜನರಲ್ ಕರ್ಲ್ ರಸೀನ್ ಅವರು ಸೋಮವಾರ ಜುಕರ್‌ಬರ್ಗ್ ವಿರುದ್ಧ ಜಿಲ್ಲಾ ಉಚ್ಚ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದಾರೆ.

ಜುಕರ್‌ಬರ್ಗ್ ಕಂಪನಿಯ ಪ್ರಮುಖ ಸಭೆಗಳಲ್ಲಿ ಖುದ್ದಾಗಿ ಪಾಲ್ಗೊಳ್ಳುತ್ತಾರೆ. ಬಳಕೆದಾರರ ಮಾಹಿತಿಯನ್ನು ಹಂಚಿಕೊಳ್ಳುವುದರಿಂದ ಉಂಟಾಗುವ ಅಪಾಯಗಳ ಬಗ್ಗೆ ಅವರಿಗೆ ಅರಿವಿದೆ. ಆದಾಗ್ಯೂ ಕೇಂಬ್ರಿಡ್ಜ್ ಅನಾಲಿಟಿಕಾ ಕಂಪನಿ ಜೊತೆ ಬಳಕೆದಾರರ ಖಾಸಗಿ ಮಾಹಿತಿ ಹಂಚಿಕೊಳ್ಳಲಾಗಿದೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.

ಕೇಂಬ್ರಿಡ್ಜ್ ಅನಾಲಿಟಿಕಾ 8.7 ಕೋಟಿ ಫೇಸ್‌ಬುಕ್ ಬಳಕೆದಾರರ ಮಾಹಿತಿಯನ್ನು ಅಕ್ರಮವಾಗಿ ಸಂಗ್ರಹಿಸಿ, ಅದನ್ನು2016ರ ಅಮೆರಿಕ ಅಧ್ಯಕ್ಷೀಯ ಚುನಾವಣೆ ವೇಳೆ ಡೊನಾಲ್ಡ್ ಟ್ರಂಪ್ ಪರವಾಗಿ ಕೆಲಸ ಮಾಡಲು ದುರ್ಬಳಕೆ ಮಾಡಿಕೊಂಡಿದೆ ಎಂಬ ಆರೋಪ ಕೇಳಿಬಂದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.