ಅಥೆನ್ಸ್: ಗ್ರೀಸ್‌ನಲ್ಲಿ ಸಂಭವಿಸಿದ ಭೀಕರ ಕಾಡ್ಗಿಚ್ಚಿನಲ್ಲಿ 88 ಮಂದಿ ಸಾವಿಗೀಡಾಗಿದ್ದಾರೆ. ಇವರಲ್ಲಿ ಹಲವರು ಮಕ್ಕಳು ಸೇರಿದ್ದಾರೆ.

ಗಂಭೀರವಾಗಿ ಗಾಯಗೊಂಡಿರುವ ಹಲವು ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದೇಹಗಳು ಸುಟ್ಟು ಕರಕಲಾಗಿರುವುದರಿಂದ ಮೃತರ ಗುರುತು ಪತ್ತೆ ಹಚ್ಚುವುದು ಕಷ್ಟಸಾಧ್ಯವಾಗಿದೆ.

ಉಪಗ್ರಹ ನಕ್ಷೆಗಳಿಂದ ಮಾಹಿತಿ ಸಂಗ್ರಹಿಸಲಾಗಿದ್ದು, ಸೋಮವಾರ ಅಟಿಕಾ ಪ್ರದೇಶದಲ್ಲಿ ಒಂದೇ ಸಮಯದಲ್ಲಿ 13 ಕಡೆ ಬೆಂಕಿಯ ಜ್ವಾಲೆ ಕಾಣಿಸಿಕೊಂಡಿದೆ.

ಘಟನೆಗೆ ಸಂಬಂಧಿಸಿದಂತೆ ಸರ್ಕಾರದ ವಿರುದ್ಧ ಟೀಕೆಗಳು ಕೇಳಿ ಬಂದಿವೆ. ಕಳಪೆ ನಗರ ಯೋಜನೆ, ಅಚ್ಚುಕಟ್ಟಾದ ಪ್ರವೇಶ ಮಾರ್ಗಗಳ ಕೊರತೆ, ಕಟ್ಟಡಗಳ ನಿರ್ಮಾಣಕ್ಕಾಗಿ ಅರಣ್ಯ ನಾಶ ಕಾಡ್ಗಿಚ್ಚಿಗೆ ಕಾರಣವಾಗಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.