ಗುರುವಾರ, 19 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

Bangla Unrest | 21 ದಿನಗಳ ಹಿಂಸಾಚಾರದಲ್ಲಿ 440 ಸಾವು!

Published : 6 ಆಗಸ್ಟ್ 2024, 10:56 IST
Last Updated : 6 ಆಗಸ್ಟ್ 2024, 10:56 IST
ಫಾಲೋ ಮಾಡಿ
Comments

ಢಾಕಾ: ಮೀಸಲಾತಿ ವಿರೋಧಿಸಿ ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಹಿಂಸಾಚಾರದಲ್ಲಿ 440 ಮಂದಿ ಮೃತಪಟ್ಟಿದ್ದಾರೆ. ಶೇಖ್ ಹಸೀನಾ ಬಾಂಗ್ಲಾದೇಶದ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿದ ಬಳಿಕವೂ ಹಿಂಸಾಚಾರದಲ್ಲಿ 100ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದರು.

ಪ್ರತಿಭಟನಾಕಾರರು ಢಾಕಾದಲ್ಲಿರುವ ಪ್ರಧಾನಿ ತಂಗುವ ಅರಮನೆಗೆ ಸೋಮವಾರ ನುಗ್ಗಿದ್ದರು. ದೇಶದಲ್ಲಿ ಸೃಷ್ಟಿಯಾದ ಅರಾಜಕತೆಗೆ ನಲುಗಿದ ಶೇಖ್‌ ಹಸೀನಾ ಬಾಂಗ್ಲಾದೇಶದ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿ ಸೇನಾ ಹೆಲಿಕಾಪ್ಟರ್‌ನಲ್ಲಿ ಅಜ್ಞಾತ ಸ್ಥಳಕ್ಕೆ ತೆರಳಿದ್ದರು. ಹಸೀನಾ ದೇಶ ಬಿಟ್ಟ ಬಳಿಕವೂ ಕೆಲಕಾಲ ಹಿಂಸಾಚಾರ ಮುಂದುವರಿದಿತ್ತು.

ಇಂದು (ಮಂಗಳವಾರ) ಬಾಂಗ್ಲಾದೇಶವು ಸಹಜ ಸ್ಥಿತಿಗೆ ಮರಳುತ್ತಿದ್ದು, ಪೊಲೀಸರು ಹಾಗೂ ಸೇನೆಯು ರಸ್ತೆಗಳಲ್ಲಿ ಗಸ್ತು ತಿರುಗುತ್ತಿದ್ದಾರೆ. ಈ ಹಿಂಸಾಚಾರದಿಂದಾಗಿ ಹಲವು ದಿನಗಳಿಂದ ಮುಚ್ಚಲ್ಪಟ್ಟಿದ್ದ ಶಾಲೆಗಳು ಇಂದು ಪುನಃ ಆರಂಭವಾಗಿವೆ. ಬಸ್ಸುಗಳು ಮತ್ತು ಇತರ ಸಾರ್ವಜನಿಕ ಸಾರಿಗೆಗಳು ಸಂಚಾರ ಆರಂಭಿಸಿವೆ. ವ್ಯಾಪಾರಿಗಳು ಅಂಗಡಿಗಳನ್ನು ತೆರೆಯುತ್ತಿದ್ದಾರೆ. ಸರ್ಕಾರಿ ವಾಹನಗಳು ಕಚೇರಿಗಳಿಗೆ ತೆರಳಿವೆ, ಹಲವು ಬ್ಯಾಟರಿ ಚಾಲಿತ ರಿಕ್ಷಾಗಳು ರಸ್ತೆಗಿಳಿದಿವೆ ಎಂದು ವರದಿಯಾಗಿದೆ

ಸೋಮವಾರ ನಡೆದ ಪ್ರತಿಭಟನೆಯಲ್ಲಿ ಢಾಕಾ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ನಡೆದ ಘರ್ಷಣೆಗಳಲ್ಲಿ 109 ಮಂದಿ ಮೃತಪಟ್ಟಿದ್ದಾರೆ ಎಂದು ಪ್ರೋಥೋಮ್ ಅಲೋ ಬಂಗಾಳಿ ಪತ್ರಿಕೆ ವರದಿ ಮಾಡಿದೆ.

ಮೀಸಲಾತಿ ವಿರೋಧಿಸಿ ಜುಲೈ 16 ರಿಂದ ಆಗಸ್ಟ್‌5ರವರೆಗೆ 21 ದಿನಗಳ ಕಾಲ ನಡೆದ ಪ್ರತಿಭಟನೆಯಲ್ಲಿ 440 ಮಂದಿ ಮೃತಪಟ್ಟಿದ್ದಾರೆ ಎಂದು ಬಂಗಾಳಿ ಪತ್ರಿಕೆ ವರದಿ ಮಾಡಿದೆ.

ಬಾಂಗ್ಲಾ ಸ್ವಾತಂತ್ರ್ಯ ಸಮರದಲ್ಲಿ ಭಾಗಿಯಾಗಿದ್ದವರ ಸಂಬಂಧಿಕರಿಗೆ ಸರ್ಕಾರದ ಹುದ್ದೆಗಳಲ್ಲಿ ಶೇ 30ರಷ್ಟು ಮೀಸಲಾತಿ ಕಲ್ಪಿಸುವ ವಿವಾದಾತ್ಮಕ ಮೀಸಲು ವ್ಯವಸ್ಥೆಯನ್ನು ಕೊನೆಗೊಳಿಸಬೇಕು ಎಂಬುದು ಪ್ರತಿಭಟನಕಾರರ ಬೇಡಿಕೆಯಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT