ಶಾಂಘೈ: ಚೀನಾದ ಎರಡನೇ ಅತಿ ದೊಡ್ಡ ನಗರ ಶಾಂಘೈನಲ್ಲಿ ಕೋವಿಡ್–19 ಪರಿಸ್ಥಿತಿ ಬಿಗಡಾಯಿಸಿದ್ದು, ಕೋವಿಡ್‌ನಿಂದ ಈವರೆಗೆ ಮೃತಪಟ್ಟವರ ಒಟ್ಟು ಸಂಖ್ಯೆ 87ಕ್ಕೆ ಏರಿಕೆಯಾಗಿದೆ. ಇವರೆಲ್ಲರ ಸರಾಸರಿ ವಯಸ್ಸು 81 ಎಂದು ಭಾನುವಾರ ಪುರಸಭೆಯ ಆರೋಗ್ಯ ಆಯೋಗ ತಿಳಿಸಿದೆ.

ಮೃತರಲ್ಲಿ 101 ವರ್ಷದ ವ್ಯಕ್ತಿಯು ಸೇರಿದ್ದಾರೆ ಎಂದು ಕ್ಸಿನ್ಹುವಾ ಸುದ್ದಿಸಂಸ್ಥೆ ವರದಿ ಮಾಡಿದೆ.

ಕೊರೊನಾ ಸೋಂಕಿನಿಂದ ಮೃತಪಟ್ಟಿರುವವರಲ್ಲಿ ಬಹುತೇಕರು ಕ್ಯಾನ್ಸರ್‌ಕಾರಕ ದುರ್ಮಾಂಸ, ಹೃದಯ ಸಂಬಂಧಿ ಕಾಯಿಲೆ ಮತ್ತು ಅಧಿಕ ರಕ್ತದೊತ್ತಡದಂತಹ ಗಂಭೀರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು ಎಂದು ಆಯೋಗ ತಿಳಿಸಿದೆ.

ಹೆಚ್ಚುತ್ತಿರುವ ಕೋವಿಡ್‌ನಿಂದಾಗಿ ಮರಣ ಪ್ರಮಾಣವನ್ನು ಕಡಿಮೆ ಮಾಡಲು ಶಾಂಘೈನಲ್ಲಿ ಹೆಚ್ಚಿನ ವೈದ್ಯಕೀಯ ತಂಡಗಳನ್ನು ನಿಯೋಜಿಸಲಾಗುತ್ತಿದೆ. ಇವುಗಳು ಕಡಿಮೆ ರೋಗನಿರೋಧಕ ಶಕ್ತಿಯಿಂದ ಬಳಲುತ್ತಿರುವ ಹಿರಿಯ ನಾಗರಿಕರಿಗೆ ಸಹಾಯ ಮಾಡುವ ಗುರಿಯನ್ನು ಹೊಂದಿವೆ.

ಸದ್ಯ ನಗರದ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ 157 ರೋಗಿಗಳು ತೀವ್ರ ಗಂಭೀರ ಮತ್ತು 18 ರೋಗಿಗಳು ಗಂಭೀರ ಸ್ಥಿತಿಯಲ್ಲಿದ್ದಾರೆ. ಕಳೆದ 24 ಗಂಟೆಗಳಲ್ಲಿ ಶಾಂಘೈ 1,401 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, 19,657 ಸ್ಥಳೀಯರು ಲಕ್ಷಣ ರಹಿತವಾಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.