ಕೇಪ್ ಟೌನ್ (ದಕ್ಷಿಣ ಆಫ್ರಿಕಾ): ದಕ್ಷಿಣ ಆಫ್ರಿಕಾದ ಕೋಸ್ಟಲ್ ಸಿಟಿಯ ಜಾರ್ಜ್ ನಗರದಲ್ಲಿ ನಿರ್ಮಾಣ ಹಂತದಲ್ಲಿದ್ದ ಬಹುಮಡಿಯ ಕಟ್ಟಡ ಕುಸಿತ ಅವಘಡದಲ್ಲಿ ಮೃತಪಟ್ಟವರ ಸಂಖ್ಯೆ 32ಕ್ಕೆ ಏರಿಕೆಯಾಗಿದೆ. ಇನ್ನೂ 14 ಜನರು ಅವಶೇಷಗಳಡಿ ಸಿಲುಕಿದ್ದಾರೆ.

ಘಟನೆಯು ಮೇ 6ರಂದು ಮಧ್ಯಾಹ್ನ ಸಂಭವಿಸಿತ್ತು. ತಕ್ಷಣ ಸ್ಥಳಕ್ಕೆ ಧಾವಿಸಿದ ವಿಪತ್ತು ನಿರ್ವಹಣಾ ತಂಡವು, ಇದುವರೆಗೆ ಶೋಧ ಕಾರ್ಯ ನಡೆಸುತ್ತಿದೆ.

ಭಾನುವಾರ ಅಚ್ಚರಿಯಂಬಂತೆ ಅವಶೇಷಗಳಡಿ ಇನ್ನೂ ಬದುಕುಳಿದಿದ್ದ ಮೂವರನ್ನು ವಿಪತ್ತು ನಿರ್ವಹಣಾ ತಂಡವು ರಕ್ಷಿಸಿದೆ.

ಈ ಘಟನೆಯಲ್ಲಿ 21 ಕಾರ್ಮಿಕರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರ ಪೈಕಿ 11 ಕಾರ್ಮಿಕರಿಗೆ ಗಂಭೀರ ಗಾಯಗಳಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.