ವಾಷಿಂಗ್ಟನ್: ಹವಾಮಾನ ಬದಲಾವಣೆ ತಡೆಗೆ ಸಂಬಂಧಿಸಿ ಕಾನೂನುಗಳನ್ನು ಸಮರ್ಪಕವಾಗಿ ಅನುಷ್ಠಾನ ಮಾಡದ ದೇಶಗಳಿಂದ ಆಮದು ಮಾಡಿಕೊಳ್ಳುವ ಸರಕುಗಳ ಮೇಲೆ ತೆರಿಗೆ ವಿಧಿಸಲು ಅವಕಾಶ ನೀಡುವ ಮಸೂದೆಯೊಂದನ್ನು ಮಂಡಿಸಲು ಅಮೆರಿಕದ ಇಬ್ಬರು ಪ್ರಭಾವಿ ಸಂಸದರು ಮುಂದಾಗಿದ್ದಾರೆ.

ಸಂಸದರಾದ ಕ್ರಿಸ್ ಕೂನ್ಸ್ ಹಾಗೂ ಸ್ಕಾಟ್ ಪೀಟರ್ಸ್ ಎಂಬುವವರು ಈ ಮಸೂದೆಯನ್ನು ಉಭಯ ಸದನಗಳಲ್ಲಿ ಮಂಡಿಸಲು ನಿರ್ಧರಿಸಿದ್ದಾರೆ.

ಹವಾಮಾನ ಬದಲಾವಣೆ ಒಡ್ಡಿರುವ ಸವಾಲುಗಳನ್ನು ಎದುರಿಸುವ ಸಂಬಂಧ ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಲು ವಿಫಲವಾಗಿರುವ ಚೀನಾ ಹಾಗೂ ಇತರ ಕೆಲವು ದೇಶಗಳಿಂದ ಆಮದಾಗುವ ಸರಕುಗಳ ಮೇಲೆ ಈ ಉದ್ದೇಶಿತ ಮಸೂದೆ ತೆರಿಗೆ ವಿಧಿಸಲು ಅನುವು ಮಾಡಿಕೊಡಲಿದೆ.

ಆಮದು ಮಾಡಿಕೊಳ್ಳಲಾಗುವ ಸರಕುಗಳ ಪೈಕಿ ಕೆಲವು ಅಧಿಕ ಪ್ರಮಾಣದ ಇಂಗಾಲ ಹೊರಸೂಸುವಿಕೆಗೆ ಕಾರಣವಾಗುತ್ತವೆ. ಇದರಿಂದ ಪರಿಸರದ ಮೇಲಾಗುವ ದುಷ್ಪರಿಣಾಮ ತಡೆಗಟ್ಟುವ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳಬೇಕಾಗುತ್ತದೆ. ಇಂಥ ತಂತ್ರಜ್ಞಾನಕ್ಕಾಗಿ, ಸರಕುಗಳನ್ನು ಆಮದು ಮಾಡಿಕೊಳ್ಳುವ ಕಂಪನಿಗಳು ಭಾರಿ ಮೊತ್ತವನ್ನು ವ್ಯಯಿಸಬೇಕಾಗುತ್ತದೆ ಎಂದು ಈ ಇಬ್ಬರು ಸಂಸದರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.