ಗುರುವಾರ, 19 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಗುಂಡಿನ ದಾಳಿ; ಡೊನಾಲ್ಡ್ ಟ್ರಂಪ್ ಆಸ್ಪತ್ರೆಯಿಂದ ಬಿಡುಗಡೆ: FBIನಿಂದ ತನಿಖೆ ಆರಂಭ

Published : 14 ಜುಲೈ 2024, 3:28 IST
Last Updated : 14 ಜುಲೈ 2024, 3:28 IST
ಫಾಲೋ ಮಾಡಿ
Comments

ವಾಷಿಂಗ್ಟನ್: ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ ನಡೆದ ಗುಂಡಿನ ದಾಳಿ ಪ್ರಕರಣದ ತನಿಖೆ ನಡೆಸುತ್ತಿರುವುದಾಗಿ ಅಮೆರಿಕದ ಅತ್ಯುನ್ನತ ತನಿಖಾ ಸಂಸ್ಥೆಯಾದ ಎಫ್‌ಬಿಐ (ಫೆಡರಲ್ ಬ್ಯೂರೊ ಆಫ್ ಇನ್‌ವೆಸ್ಟಿಗೇಷನ್) ಖಚಿತಪಡಿಸಿದೆ.

ಅಮೆರಿಕದ ಪೆನ್ಸಿಲ್ವೇನಿಯಾದಲ್ಲಿ ಡೊನಾಲ್ಡ್‌ ಟ್ರಂಪ್ ಅವರು ಹಮ್ಮಿಕೊಂಡಿದ್ದ ರ‍್ಯಾಲಿಯಲ್ಲಿ ಬಂದೂಕುಧಾರಿಯೊಬ್ಬ ಗುಂಡಿನ ದಾಳಿ ನಡೆಸಿದ್ದಾನೆ. ಘಟನೆಯಲ್ಲಿ 78 ವರ್ಷದ ಟ್ರಂಪ್ ಅವರಿಗೆ ಗಾಯವಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಟ್ರಂಪ್ ಮೇಲೆ ದಾಳಿ ನಡೆಸಿರುವ ಶಂಕಿತ ಬಂದೂಕುಧಾರಿಯನ್ನು ಹತ್ಯೆ ಮಾಡಲಾಗಿದೆ ಎಂದು ಅಮೆರಿಕದ ಸೀಕ್ರೆಟ್ ಸರ್ವಿಸ್ ತಿಳಿಸಿದೆ. ಜತೆಗೆ, ರ‍್ಯಾಲಿಯಲ್ಲಿ ಭಾಗಿಯಾಗಿದ್ದ ಟ್ರಂಪ್‌ ಬೆಂಬಲಿಗರೊಬ್ಬರು ಸಾವಿಗೀಡಾಗಿದ್ದು, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಭದ್ರತಾ ವೈಫಲ್ಯ ಸೇರಿದಂತೆ ಘಟನೆ ಕುರಿತು ಸಮಗ್ರ ತನಿಖೆ ನಡೆಸಲಾಗುತ್ತಿದೆ. ಘಟನೆಯನ್ನು ಅಮೆರಿಕದ ಅಧ್ಯಕ್ಷ ಜೋ ಬೈಡನ್, ಉಪಾಧ್ಯಕ್ಷೆ ಕಮಲಾ ಹ್ಯಾರಿಸ್, ಮಾಜಿ ಅಧ್ಯಕ್ಷರಾದ ಬರಾಕ್ ಒಬಾಮಾ, ಜಾರ್ಜ್ ಡಬ್ಲ್ಯು ಬುಷ್ ಹಾಗೂ ಬಿಲ್ ಕ್ಲಿಂಟನ್, ಭಾರತದ ಪ್ರಧಾನಿ ನರೇಂದ್ರ ಮೋದಿ ಖಂಡಿಸಿದ್ದಾರೆ.

ಆಸ್ಪತ್ರೆಯಿಂದ ಟ್ರಂಪ್ ಬಿಡುಗಡೆ: ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶನಿವಾರ ತಡರಾತ್ರಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT