ಬೀಜಿಂಗ್: ಚೀನಾದ ಪೂರ್ವ ನಗರ ವುಕ್ಸಿಯ ಶಾಲೆಯೊಂದರಲ್ಲಿ ವಿದ್ಯಾರ್ಥಿಯೊಬ್ಬ ಸಿಕ್ಕ ಸಿಕ್ಕವರ ಮೇಲೆ ಚಾಕುವಿನಿಂದ ದಾಳಿ ಮಾಡಿದ್ದಾನೆ. ಶನಿವಾರ ಸಂಜೆ ನಡೆದ ಈ ಘಟನೆಯಲ್ಲಿ ಎಂಟು ಮಂದಿ ಮೃತಪಟ್ಟು, 17 ಜನರು ಗಾಯಗೊಂಡಿದ್ದಾರೆ.

ಜಿಯಾಂಗ್ಸು ಪ್ರಾಂತ್ಯದ 'ವುಕ್ಸಿ ವೊಕೇಶನಲ್ ಇನ್ಸ್ಟಿಟ್ಯೂಟ್ ಆಫ್ ಆರ್ಟ್ಸ್ ಅಂಡ್ ಟೆಕ್ನಾಲಜಿ' ಶಾಲೆಯಲ್ಲಿ ದಾಳಿ ನಡೆದಿದೆ ಎಂದು ಯಿಕ್ಸಿಂಗ್ ಕೌಂಟಿ ಪೊಲೀಸರು ಹೇಳಿದ್ದಾರೆ.

ಶಾಲೆಯ ಹಳೇ ವಿದ್ಯಾರ್ಥಿಯಾಗಿರುವ 21 ವರ್ಷ ಆರೋಪಿ, ಈ ವರ್ಷ ಪದವಿ ಪೂರ್ಣಗೊಳಿಸುವ ನಿರೀಕ್ಷೆಯಲ್ಲಿದ್ದ. ಆದರೆ, ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡಿದ್ದ. ಇದರಿಂದ ಕುಪಿತನಾದ ಆತ, ತನ್ನ ಸಿಟ್ಟನ್ನು ತೀರಿಸಿಕೊಳ್ಳುವ ಸಲುವಾಗಿ ಶಾಲೆಗೆ ತೆರಳಿ ಕೃತ್ಯವೆಸಗಿದ್ದಾಗಿ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ದಾಳಿ ಸಂತ್ರಸ್ತರಿಗೆ ಚಿಕಿತ್ಸೆ ಮುಂದುವರಿದಿದೆ ಎಂದೂ ಹೇಳಿದ್ದಾರೆ.

ಚೀನಾದ ದಕ್ಷಿಣಕ್ಕಿರುವ ಝಹೈ ನಗರದಲ್ಲಿ ಕೆಲವು ದಿನಗಳ ಹಿಂದಷ್ಟೇ ಹಿಟ್ ಅಂಡ್ ರನ್ ಪ್ರಕರಣ ವರದಿಯಾಗಿತ್ತು. ಕ್ರೀಡಾ ಕೇಂದ್ರವೊಂದರ ಹೊರಗೆ ನಿಂತಿದ್ದ ಜನರ ಗುಂಪಿನ ಮೇಲೆ ಕಾರು ಹರಿಸಿದ ಪರಿಣಾಮ 35 ಜನರು ಸಾವನ್ನಪ್ಪಿದ್ದರು. 43 ಮಂದಿ ಗಾಯಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.