ಗುರುವಾರ, 19 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

Explained: ಟ್ರಂಪ್ ಮೇಲೆ ಗುಂಡಿನ ದಾಳಿ, ಕೂದಲೆಳೆಯ ಅಂತರದಲ್ಲಿ ಪಾರು;ಆಗಿದ್ದೇನು?

Published : 14 ಜುಲೈ 2024, 3:13 IST
Last Updated : 14 ಜುಲೈ 2024, 3:13 IST
ಫಾಲೋ ಮಾಡಿ
Comments

ವಾಷಿಂಗ್ಟನ್: ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಹತ್ಯೆ ಮಾಡುವ ಯತ್ನ ನಡೆದಿದೆ. ಪೆನ್ಸಿಲ್ವೇನಿಯಾದಲ್ಲಿ ಟ್ರಂಪ್ ಹಮ್ಮಿಕೊಂಡಿದ್ದ ಚುನಾವಣಾ ರ‍್ಯಾಲಿಯಲ್ಲಿ ಗುಂಡಿನ ದಾಳಿ ನಡೆದಿದೆ. ಕೂದಲೆಳೆಯ ಅಂತರದಲ್ಲಿ ಟ್ರಂಪ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಗೊಂಡ ಟ್ರಂಪ್ ಅವರಿಗೆ ಚಿಕಿತ್ಸೆ ಒದಗಿಸಲಾಗುತ್ತಿದೆ.

ಆಗಿದ್ದೇನು?

ಶನಿವಾರ ಸಂಜೆ 6.15ರ ಸುಮಾರಿಗೆ ಹಮ್ಮಿಕೊಂಡಿದ್ದ ಚುನಾವಣಾ ರ‍್ಯಾಲಿಯಲ್ಲಿ ಸಾವಿರಾರು ಜನರನ್ನು ಉದ್ದೇಶಿಸಿ ಟ್ರಂಪ್ ವೇದಿಕೆಯಲ್ಲಿ ಭಾಷಣ ಮಾಡುತ್ತಿದ್ದ ವೇಳೆ ಶಂಕಿತ ಬಂದೂಕುಧಾರಿ ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾನೆ.

ಶಂಕಿತ ಬಂದೂಕುಧಾರಿ ಒಂದಕ್ಕಿಂತ ಹೆಚ್ಚು ಬಾರಿ ಗುಂಡಿನ ದಾಳಿ ನಡೆಸಿದ್ದಾನೆ ಎನ್ನಲಾಗಿದೆ. ತಕ್ಷಣವೇ ಟ್ರಂಪ್ ವೇದಿಕೆಯ ಕೆಳಗಡೆ ಕುಳಿತುಕೊಳ್ಳುವ ಮೂಲಕ ಮತ್ತಷ್ಟು ದಾಳಿಯಿಂದ ಪಾರಾಗುತ್ತಾರೆ. ಆದರೂ ಟ್ರಂಪ್ ಅವರ ಬಲ ಕಿವಿಯ ಭಾಗಕ್ಕೆ ಗುಂಡೇಟು ತಗುಲಿದೆ.

ಗಾಯಗೊಂಡ ಟ್ರಂಪ್ ಅವರನ್ನು ಅಮೆರಿಕದ ಸೀಕ್ರೆಟ್ ಸರ್ವಿಸ್‌ನ ಭದ್ರತಾ ಸಿಬ್ಬಂದಿ ಸುತ್ತುವರಿಯುತ್ತಾರೆ. ಅಲ್ಲದೆ ವೇದಿಕೆಯಿಂದ ಸುರಕ್ಷಿತ ಪ್ರದೇಶಕ್ಕೆ ಕರೆದೊಯ್ದಿದ್ದಾರೆ. ಈ ಎಲ್ಲ ದೃಶ್ಯಾವಳಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ವೇದಿಕೆಯಿಂದ ತೆರಳುತ್ತಿದ್ದಾಗ ಎದೆಗುಂದದ ಟ್ರಂಪ್ ಮತ್ತೆ ತಮ್ಮ ಅಭಿಮಾನಿಗಳತ್ತ ಕೈಬೀಸುತ್ತಾರೆ. ಈ ವೇಳೆ ಮುಖದಲ್ಲಿ ರಕ್ತದ ಕಲೆ ಕಾಣಿಸುತ್ತದೆ. ಟ್ರಂಪ್ ಸುರಕ್ಷಿತವಾಗಿದ್ದಾರೆ ಎಂದು ಅಮೆರಿಕದ ಸೀಕ್ರೆಟ್ ಸರ್ವಿಸ್ ತಿಳಿಸಿದೆ.

ಶಂಕಿತ ಬಂದೂಕುಧಾರಿಯ ಹತ್ಯೆ...

ಟ್ರಂಪ್ ಮೇಲೆ ದಾಳಿ ನಡೆಸಿರುವ ಶಂಕಿತ ಬಂದೂಕುಧಾರಿಯನ್ನು ಹತ್ಯೆ ಮಾಡಲಾಗಿದೆ ಎಂದು ಅಮೆರಿಕದ ಸೀಕ್ರೆಟ್ ಸರ್ವಿಸ್ ತಿಳಿಸಿದೆ. ಘಟನೆಯಲ್ಲಿ ಪ್ರೇಕ್ಷಕನೊಬ್ಬ ಸಾವಿಗೀಡಾಗಿದ್ದು, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಭದ್ರತಾ ವೈಫಲ್ಯ ಸೇರಿದಂತೆ ಘಟನೆ ಕುರಿತು ಸಮಗ್ರ ತನಿಖೆ ನಡೆಸಲಾಗುತ್ತಿದೆ. ಘಟನೆಯನ್ನು ಅಮೆರಿಕದ ಅಧ್ಯಕ್ಷ ಜೋ ಬೈಡನ್, ಉಪಾಧ್ಯಕ್ಷೆ ಕಮಲಾ ಹ್ಯಾರಿಸ್, ಮಾಜಿ ಅಧ್ಯಕ್ಷರಾದ ಬರಾಕ್ ಒಬಾಮಾ, ಜಾರ್ಜ್ ಡಬ್ಲ್ಯು ಬುಷ್ ಹಾಗೂ ಬಿಲ್ ಕ್ಲಿಂಟನ್ ಖಂಡಿಸಿದ್ದಾರೆ.

ಘಟನೆಯನ್ನು ಖಂಡಿಸಿ ಅಮೆರಿಕದಲ್ಲಿ ಟ್ರಂಪ್ ಬೆಂಬಲಿಗರಿಂದ ಭಾರಿ ಪ್ರತಿಭಟನೆ ನಡೆದಿದೆ.

ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ

ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ

(ರಾಯಿಟರ್ಸ್ ಚಿತ್ರ)

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT