ಅಸ್ತಾನ (ಕಜಕಸ್ತಾನ): ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಚೀನಾದ ವಿದೇಶಾಂಗ ಸಚಿವ ವಾಂಗ್ ಯೀ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ಕಜಕಸ್ತಾನದಲ್ಲಿ ನಡೆಯುತ್ತಿರುವ ಶಾಂಘೈ ಸಹಕಾರ ಸಂಸ್ಥೆಯ (ಎಸ್ಸಿಒ) ನಾಯಕರ ವಾರ್ಷಿಕ ಸಭೆಯ ವೇಳೆ ಈ ಭೇಟಿ ನಡೆದಿದೆ.

ಈ ಕುರಿತು ಭಾರತೀಯ ವಿದೇಶಾಂಗ ಸಚಿವಾಲಯ ಮಾಹಿತಿ ಹಂಚಿಕೊಂಡಿದೆ.

2020ರಿಂದ ಈಚೆಗೆ ಭಾರತ-ಚೀನಾ ಮಧ್ಯೆ ಪೂರ್ವ ಲಡಾಖ್ ಸೇರಿದಂತೆ ವಾಸ್ತವಿಕ ಗಡಿ ನಿಯಂತ್ರಣ ರೇಖೆ(ಎಲ್ಎಸಿ)ಯಲ್ಲಿ ಗಡಿ ವಿವಾದ ಉಲ್ಬಣಿಸಿದೆ. ಈ ಹಿನ್ನೆಲೆಯಲ್ಲಿ ಈ ಭೇಟಿ ಹೆಚ್ಚಿನ ಮಹತ್ವ ಗಿಟ್ಟಿಸಿಕೊಂಡಿದೆ.

ಅಸ್ತಾನದಲ್ಲಿರುವ ಮಹಾತ್ಮ ಗಾಂಧಿ ಅವರ ಪುತ್ಥಳಿಗೆ ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರು ಬುಧವಾರ ನಮನ ಸಲ್ಲಿಸಿದ್ದರು. ಅಲ್ಲದೆ ಹಲವು ಜಾಗತಿಕ ನಾಯಕರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದರು.
.ರಷ್ಯಾ ಸೇನೆಯಲ್ಲಿರುವ ಭಾರತೀಯರ ಸುರಕ್ಷತೆ ಬಗ್ಗೆ ಜೈಶಂಕರ್ ಕಳವಳ.ಶ್ರೀಲಂಕಾ ಅಧ್ಯಕ್ಷರ ಜೊತೆ ಜೈಶಂಕರ್ ಭೇಟಿ, ಚರ್ಚೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.