ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಅಮೆರಿಕನ್ನರು ಒಗ್ಗಟ್ಟನ್ನು ಕಾಯ್ದುಕೊಳ್ಳಬೇಕು: ಡೊನಾಲ್ಡ್‌ ಟ್ರಂಪ್

ರಿಪಬ್ಲಿಕನ್‌ ಪಕ್ಷದ ಸಮಾವೇಶ ಉದ್ದೇಶಿಸಿ ಭಾಷಣ
Published 19 ಜುಲೈ 2024, 12:55 IST
Last Updated 19 ಜುಲೈ 2024, 12:55 IST
ಅಕ್ಷರ ಗಾತ್ರ

ಮಿಲ್ವಾಕೀ(ಅಮೆರಿಕ): ‘ಸಂಕಷ್ಟದ ಈ ಹೊತ್ತಿನಲ್ಲಿ ಎಲ್ಲ ಅಮೆರಿಕನ್ನರು ಒಗ್ಗಟ್ಟನ್ನು ಕಾಯ್ದುಕೊಳ್ಳಬೇಕು’ ಎಂದು ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳಿದ್ದಾರೆ.

‘ನವೆಂಬರ್‌ 5ರಂದು ನಡೆಯುವ ಅಧ್ಯಕ್ಷೀಯ ಚುನಾವಣೆಯಲ್ಲಿ ನನ್ನನ್ನು ಆಯ್ಕೆ ಮಾಡಬೇಕು’ ಎಂದು ಮನವಿ ಮಾಡಿದರು. 

ಇಲ್ಲಿ ನಡೆಯುತ್ತಿರುವ ರಿಪಬ್ಲಿಕನ್‌ ಪಕ್ಷದ ರಾಷ್ಟ್ರೀಯ ಸಮಾವೇಶದಲ್ಲಿ ಅವರು ಪಕ್ಷದ ಕಾರ್ಯಕರ್ತರು ಹಾಗೂ ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡಿದರು. ತಮ್ಮ ಹತ್ಯೆ ಯತ್ನದ ನಂತರ ಟ್ರಂಪ್‌ ಅವರು ಮೊದಲ ಬಾರಿಗೆ ಬಹಿರಂಗ ಸಭೆಯಲ್ಲಿ ಪಾಲ್ಗೊಂಡಿದ್ದಾರೆ.

‘ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ ನನ್ನನ್ನು ಪಕ್ಷದ ಅಭ್ಯರ್ಥಿಯನ್ನಾಗಿ ನಾಮನಿರ್ದೇಶನ ಮಾಡಿರುವುದಕ್ಕೆ ನನಗೆ ಹೆಮ್ಮೆಯ ವಿಷಯ. ಪಕ್ಷದ ಈ ನಿರ್ಧಾರವನ್ನು ಒಪ್ಪಿಕೊಳ್ಳುವೆ’ ಎಂದ ಅವರು, ‘ನವೆಂಬರ್‌ನಲ್ಲಿ ನಡೆಯುವ ಚುನಾವಣೆಯಲ್ಲಿ ಗೆದ್ದು ಬಂದರೆ ಉತ್ತಮ ಆಡಳಿತ ನೀಡುವೆ’ ಎಂದು ವಾಗ್ದಾನ ಮಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT