ಕೈರೊ: ಸುಡಾನ್ ಸೇನೆ ಮತ್ತು ಬಂಡಾಯವೆದ್ದಿರುವ ಅರೆಸೇನಾ ಪಡೆಗಳ ನಡುವಿನ ಕಾಳಗದಿಂದಾಗಿ ರಾಜಧಾನಿ ಕೈರೊ ನಗರದಲ್ಲಿರುವ 18 ಅಂತಸ್ತಿನ ಕಟ್ಟಡದಲ್ಲಿ ಭಾನುವಾರ ಭಾರಿ ಬೆಂಕಿ ಕಾಣಿಸಿಕೊಂಡಿದೆ.

ಭಾನುವಾರ ಬೆಳ್ಳಂಬೆಳಗ್ಗೆ ಸುಡಾನ್ ಸೇನೆ ಮತ್ತು ‘ರ್ಯಾಪಿಡ್ ಸಪೋರ್ಟ್ ಫೋರ್ಸ್ಸ್‘ ನಡುವಿನ ಕಾಳಗದಿಂದ ಖಾರ್ಟೊಮ್ ಕೇಂದ್ರದಲ್ಲಿದ್ದ ಗ್ರೇಟರ್ ನೈಲ್ ಪೆಟ್ರೋಲಿಯಂ ತೈಲ ಕಂಪನಿಯ ಬೃಹತ್ ಕಟ್ಟಡದಲ್ಲಿ ಬೆಂಕಿ ಹೊತ್ತಿಕೊಂಡಿದೆ ಎಂದು ಸುಡಾನ್ ಮಾಧ್ಯಮ ವರದಿ ಮಾಡಿದೆ.

ಈ ಬೃಹತ್ ಕಟ್ಟಡದಲ್ಲಿ ಬೆಂಕಿ ಹೇಗೆ ಹೊತ್ತಿಕೊಂಡಿತು ಮತ್ತು ಈ ಘಟನೆಯಲ್ಲಿ ಸಾವು-ನೋವುಗಳು ಆಗಿವೆಯೇ ಎಂಬ ಮಾಹಿತಿ ಲಭ್ಯವಾಗಿಲ್ಲ. ಆದರೆ, ಅತಿ ಎತ್ತರದ ಈ ಕಟ್ಟಡದಿಂದ ದಟ್ಟವಾದ ಹೊಗೆ ಮಾತ್ರ ಆಕಾಶದ ಎತ್ತರಕ್ಕೆ ಚಿಮ್ಮುತ್ತಿರುವ ಚಿತ್ರಗಳು ಮತ್ತು ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ವಿಶ್ವಸಂಸ್ಥೆಯ ವರದಿ ಪ್ರಕಾರ, ಸುಡಾನ್ನಲ್ಲಿನ ಆಂತರಿಕ ಯುದ್ಧದಿಂದಾಗಿ ಆಗಸ್ಟ್ ತಿಂಗಳವರೆಗೆ 4 ಸಾವಿರಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.