ಬ್ಯಾಂಕಾಂಕ್: ಪಟಾಕಿ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಕನಿಷ್ಠ 20 ಜನ ಮೃತಪಟ್ಟು ಹಲವರು ಗಾಯಗೊಂಡಿರುವ ಘಟನೆ ಥಾಯ್ಲೆಂಡ್ನ ಮಧ್ಯ ಪ್ರಾಂತ್ಯವಾದ Suphan Buri ಎಂಬಲ್ಲಿ ಬುಧವಾರ ನಡೆದಿದೆ.

ಘಟನೆಯಲ್ಲಿ ಮೃತರ ಸಂಖ್ಯೆ ಹೆಚ್ಚಾಗಬಹುದು ಎಂದು ಸ್ಥಳೀಯ ಮಾಧ್ಯಮಗಳ ಮಾಹಿತಿ ಆಧರಿಸಿ ಸುದ್ದಿಸಂಸ್ಥೆ ರಾಯಿಟರ್ಸ್ ವರದಿ ಮಾಡಿದೆ.

ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಕಾರ್ಖಾನೆ ಸುತ್ತಮುತ್ತ ವಸತಿ ಪ್ರದೇಶಗಳು ಇದ್ದಿದ್ದರಿಂದ ಗಾಯಾಳುಗಳ ಸಂಖ್ಯೆ ಹೆಚ್ಚಾಗಿದೆ ಎಂದು ತಿಳಿಸಿದೆ.

ಅಗ್ನಿಶಾಮಕ ಸಿಬ್ಬಂದಿ ವ್ಯಾಪಕ ರಕ್ಷಣಾ ಕಾರ್ಯಾಚರಣೆ ಕೈಗೊಂಡಿದ್ದು, ಸ್ಥಳದಿಂದ ಮೃತದೇಹಗಳನ್ನು ಹೊರ ತೆಗೆಯಲಾಗುತ್ತಿದೆ ಎಂದು ತಿಳಿಸಿದೆ.

ಕಳೆದ ವರ್ಷ ಥಾಯ್ಲೆಂಡ್ನ ದಕ್ಷಿಣ ಭಾಗದಲ್ಲಿ ಸಂಭವಿಸಿದ್ದ ಪಟಾಕಿ ಕಾರ್ಖಾನೆ ದುರಂತದಲ್ಲಿ 10 ಜನ ಮೃತರಾಗಿದ್ದರು.
.ವಿದೇಶಗಳಲ್ಲೂ ಭಾರತೀಯರಿಗೆ Google Pay ಸೇವೆ: NPCI ಜೊತೆ ಮಹತ್ವದ ಒಪ್ಪಂದ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.