ಬೀಜಿಂಗ್ (ಚೀನಾ): ದಕ್ಷಿಣ ಚೀನಾದ ಗೌಂಗ್ಝೋ ನಗರಕ್ಕೆ ಸುಂಟರಗಾಳಿ ಅಪ್ಪಳಿಸಿದೆ. ಘಟನೆಯಲ್ಲಿ ಐವರು ಮೃತಪಟ್ಟು, 33 ಮಂದಿ ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ. ಈ ಬಗ್ಗೆ ಎನ್ಡಿಟಿವಿ ವರದಿ ಮಾಡಿದೆ.

ಶನಿವಾರ ಮಧ್ಯಾಹ್ನ ನಗರದ ಬೈಯುನ್ ಜಿಲ್ಲೆಯಲ್ಲಿ ಪ್ರಬಲವಾದ ಸುಂಟರಗಾಳಿ ಬೀಸಿದೆ. ಪರಿಣಾಮ 141 ಕಾರ್ಖಾನೆ ಕಟ್ಟಡಗಳು ಹಾನಿಗೊಳಗಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೈಯುನ್ ಜಿಲ್ಲೆಯ ಲಿಯಾಂಗ್ಟಿಯಾನ್ ಹಳ್ಳಿಯಲ್ಲಿರುವ ಹವಾಮಾನ ಕೇಂದ್ರದಲ್ಲಿ ಸೆಕೆಂಡಿಗೆ ಗರಿಷ್ಠ 20.6 ಮೀಟರ್ ಗಾಳಿ ದಾಖಲಾಗಿದೆ.

ಸುಂಟರಗಾಳಿ ಬಳಿಕ ದಕ್ಷಿಣ ಚೀನಾದಲ್ಲಿ ಭಾರಿ ಮಳೆ ಸುರಿದಿದೆ. ಇದರಿಂದ ಪ್ರವಾಹ ಉಂಟಾಗಿದೆ. ಪ್ರವಾಹದಲ್ಲಿ ಸಿಲುಕಿರುವವರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಕಾರ್ಯಾಚರಣೆ ನಡೆಸಲಾಗುತ್ತಿದೆ. ಸದ್ಯ ಚೀನಾ ಹವಾಮಾನ ಇಲಾಖೆ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದೆ.

ದೇಶದಲ್ಲಿ 1961ರಿಂದ 50 ವರ್ಷಗಳಲ್ಲಿ ಸುಂಟರಗಾಳಿಗೆ ಕನಿಷ್ಠ 1,772 ಜನರು ಸಾವಿಗೀಡಾಗಿದ್ದಾರೆ ಎನ್ನಲಾಗಿದೆ.
.ಪೂರ್ವ ಚೀನಾದಲ್ಲಿ ಭಾರಿ ಮಳೆ; ಐದು ಮಂದಿ ಸಾವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.