ಪೇಶಾವರ: ಪಾಕಿಸ್ತಾನದ ಖೈಬರ್ ಪಂಖ್ತುಂಖ್ವಾ ಪ್ರಾಂತ್ಯದಲ್ಲಿ ಭಾನುವಾರ ಸೇನಾಪಡೆಯ ಯೋಧರು ಕೈಗೊಂಡಿದ್ದ ಕಾರ್ಯಾಚರಣೆಯಲ್ಲಿ ಕನಿಷ್ಠ ಐವರು ಉಗ್ರರು ಮೃತಪಟ್ಟಿದ್ದಾರೆ. ಇದೇ ವೇಳೆ ಕ್ಯಾಪ್ಟನ್ ಸೇರಿ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ ಎಂದು ಪಾಕಿಸ್ತಾನ ಸೇನೆ ತಿಳಿಸಿದೆ.

‘ಖೈಬರ್ ಪಂಖ್ತುಂಖ್ವಾ ವಲಯದ ಹಸನ್ ಖೇಲ್‌ನಲ್ಲಿ ಉಗ್ರರು ಇರುವುದಾಗಿ ಗುಪ್ತಚರ ಇಲಾಖೆ ಖಚಿತ ಮಾಹಿತಿ ನೀಡಿತ್ತು. ಇದರ ಆಧಾರದ ಮೇಲೆ ಸೇನೆಯು ಉಗ್ರರ ನಿಗ್ರಹ ಕಾರ್ಯಾಚರಣೆ ಕೈಗೊಂಡು ಐವರನ್ನು ಹೊಡೆದುರುಳಿಸಿದೆ. ಕಾರ್ಯಾಚರಣೆಯಲ್ಲಿ ಮೂವರು ಉಗ್ರರು ಗಾಯಗೊಂಡಿದ್ದಾರೆ ಎಂದು ಪಾಕಿಸ್ತಾನ ಸೇನೆಯು ಪ್ರಕಟಣೆಯಲ್ಲಿ ತಿಳಿಸಿದೆ.

ಖೈಬರ್ ಪಂಖ್ತುಂಖ್ವಾ ಮತ್ತು ಬಲೂಚಿಸ್ತಾನ ವಲಯದಲ್ಲಿ ಈಚೆಗೆ ಉಗ್ರರ ಉಪಟಳ ಹೆಚ್ಚಾಗಿರುವ ನಡುವೆಯೇ ಈ ಕಾರ್ಯಾಚರಣೆ ನಡೆದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.