ವಾಷಿಂಗ್ಟನ್: ಅರ್ಥಶಾಸ್ತ್ರಜ್ಞೆ ಗೀತಾ ಗೋಪಿನಾಥ್ ಅವರುಅಂತರರಾಷ್ಟ್ರೀಯ ಹಣಕಾಸು ನಿಧಿಯ (ಐಎಂಎಫ್) ಉಪ ವ್ಯವಸ್ಥಾಪಕ ನಿರ್ದೇಶಕಿಯಾಗಿ ಬಡ್ತಿ ಪಡೆದಿದ್ದಾರೆ.

ಐಎಂಎಫ್ನಉಪ ವ್ಯವಸ್ಥಾಪಕ ನಿರ್ದೇಶಕರಾಗಿರುವಜೆಫ್ರಿ ಒಕಾಮೊಟೊ ಮುಂದಿನವರ್ಷದ ಮೊದಲ ತಿಂಗಳಲ್ಲಿ ನಿವೃತ್ತರಾಗುತ್ತಿದ್ದಾರೆ. ಆ ಹಿನ್ನೆಲೆಯಲ್ಲಿ ಗೀತಾ ಗೋಪಿನಾಥ್ ಅವರಿಗೆ ಉನ್ನತ ಹುದ್ದೆ ನೀಡಲಾಗಿದೆ ಎಂದುಐಎಂಎಫ್ ತಿಳಿಸಿದೆ.

ಈ ಕುರಿತು ಟ್ವೀಟ್ ಮೂಲಕ ತಿಳಿಸಿರುವ ಐಎಂಎಫ್ನ ವ್ಯವಸ್ಥಾಪಕ ನಿರ್ದೇಶಕಿ ಕ್ರಿಸ್ಟಲಿನಾ ಜಾರ್ಜೀವಾ, ‘ಜೆಫ್ರಿ ಮತ್ತು ಗೀತಾ ಉತ್ತಮ ಸಹೋದ್ಯೋಗಿಗಳು. ಜೆಫ್ರಿ ತೊರೆಯುತ್ತಿರುವ ವಿಚಾರ ನನಗೆ ಬೇಸರ ತಂದಿದೆ. ಆದರೆ, ಗೀತಾ ಹೊಸ ಜವಾಬ್ದಾರಿ ವಹಿಸಿಕೊಳ್ಳುತ್ತಿರುವುದರಿಂದ ನನಗೆ ಸಂತಸವಾಗಿದೆ‘ ಎಂದು ತಿಳಿಸಿದ್ದಾರೆ.

ಮೈಸೂರಿನಲ್ಲಿ ಜನಿಸಿದ ಗೀತಾ ಅವರು 2019ರ ಜನವರಿಯಲ್ಲಿ ಐಎಂಎಫ್ನಲ್ಲಿ ಮುಖ್ಯ ಅರ್ಥಶಾಸ್ತ್ರಜ್ಞೆಯಾಗಿ ಕೆಲಸ ಆರಂಭಿಸಿದ್ದರು. ಅದಕ್ಕೂ ಮೊದಲು ಅವರು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ಅಧ್ಯಾಪಕಿಯಾಗಿ ಸೇವೆ ಸಲ್ಲಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.