ವಿಶ್ವಸಂಸ್ಥೆ: ಕೇರಳ ಪ್ರವಾಹ ಹಾಗೂ ಕ್ಯಾಲಿಫೋರ್ನಿಯಾದ ಕಾಳ್ಗಿಚ್ಚಿನ ಬಗ್ಗೆ ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ಮಹಾ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರಸ್, ‘ನಾವು ನಿರೀಕ್ಷಿಸುವುದಕ್ಕಿಂತ ವೇಗವಾಗಿ ಹವಾಮಾನದಲ್ಲಿ ಬದಲಾವಣೆ ಉಂಟಾಗುತ್ತಿದೆ. ವಾತಾವರಣಕ್ಕೆ ಸಂಬಂಧಿಸಿದ ಈ ರೀತಿಯ ಬಿಕ್ಕಟ್ಟುಗಳನ್ನು ಎದುರಿಸಲು ತುರ್ತು ಕ್ರಮಗಳನ್ನು ಕೈಗೊಳ್ಳಬೇಕು’ ಎಂದು ತಿಳಿಸಿದರು.

2018ರ ಹವಾಮಾನ ಆರ್ಥಿಕ ವರದಿಯನ್ನು ಬುಧವಾರ ಬಿಡುಗಡೆಗೊಳಿಸಿ ಮಾತನಾಡಿದ ಅವರು, ‘ಕಳೆದ ವರ್ಷ ಹವಾಮಾನ ಬದಲಾವಣೆಯಿಂದ ಉಂಟಾದ ವಿಪತ್ತುಗಳಲ್ಲಿ ಸಾವಿರಾರು ಜನರು ಸಾವನ್ನಪ್ಪಿದ್ದು, ಸುಮಾರು 23 ಲಕ್ಷ ಕೋಟಿ ನಷ್ಟವಾಗಿದೆ. ಇದಕ್ಕೆ ನಾವೇ ಜವಾಬ್ದಾರರು’ ಎಂದರು.

‘ನಮ್ಮ ನಿರೀಕ್ಷೆ ಮೀರಿ ವಾತಾವರಣದಲ್ಲಿ ಉಂಟಾಗುತ್ತಿರುವ ಬದಲಾವಣೆ ವಿನಾಶಕ್ಕೆ ದಾರಿಯಾಗಿದೆ. ಇದರಿಂದ ಬಡ ಜನರು ಹಾಗೂ ದುರ್ಬಲ ವರ್ಗದವರು ಸಮಸ್ಯೆ ಎದುರಿಸುವಂತಾಗಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.