ಲೆಸ್ ಕೆಯೆಸ್, ಹೈಟಿ: ಭೀಕರ ಭೂಕಂಪನದಿಂದ ಹೈಟಿಯಲ್ಲಿ ಮೃತಪಟ್ಟವರ ಸಂಖ್ಯೆ 2,189ಕ್ಕೆ ಏರಿಕೆಯಾಗಿದೆ ಎಂದು ನಾಗರಿಕ ರಕ್ಷಣಾ ಅಧಿಕಾರಿಗಳು ತಿಳಿಸಿದ್ದಾರೆ.

ಕಳೆದ ಶನಿವಾರ ಸಂಭವಿಸಿದ 7.2 ತೀವ್ರತೆಯ ಭೂಕಂಪನದಿಂದ ಸಾವಿರಾರು ಮಂದಿ ನೆಲೆ ಕಳೆದುಕೊಂಡಿದ್ದಾರೆ. ಸರ್ಕಾರದ ನೆರವು ಇಲ್ಲದೆ, ಅನೇಕ ಸಂತ್ರಸ್ತರು ಪರಿತಪಿಸುತ್ತಿದ್ದಾರೆ.

ಅತಿಹೆಚ್ಚು ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿದ್ದ ಪ್ರಧಾನಿ ಏರಿಯಲ್ ಹೆನ್ರಿ, ಸಂತ್ರಸ್ತರಿಗೆ ಧೈರ್ಯ ತುಂಬಿದ್ದರು. ಜತೆಗೆ, ಶೀಘ್ರ ನೆರವು ಒದಗಿಸುವ ಭರವಸೆ ನೀಡಿದ್ದರು.

ಕೆಲ ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ರಕ್ಷಣಾ ಕಾರ್ಯಾಚರಣೆಗೆ ತೊಡುಕು ಉಂಟಾಗಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ... ಉಟ್ಟ ಬಟ್ಟೆ, ಚಪ್ಪಲಿಯೊಂದಿಗೆ ದೇಶ ತೊರೆದೆ: ಅಫ್ಗನ್ ಅಧ್ಯಕ್ಷ ಘನಿ ವಿಡಿಯೊ ಸಂದೇಶ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.